BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಸಾಗರದಲ್ಲಿ 29 ವರ್ಷದ ಯುವಕ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಇಂದು ಬೈಕ್ ನಲ್ಲಿ ತೆರಳುತ್ತಿದ್ದಂತ ಯುವಕನೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಮೃತ ಯುವಕ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಆಪ್ತ ಸಹಾಯಕರ ಪುತ್ರ ಎಂಬುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಬಳಸಗೋಡು ಗ್ರಾಮದ ಸಮೀಪದ ದಾವಣಗೆರೆಯಿಂದ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಂತ ಕೆ.ಆಕರ್ಷ್(29) ಎಂಬ ಯುವಕನಿಗೆ ಎದೆನೋವು ಕಾಣಿಸಿಕೊಂಡಿದೆ. ಆತನನ್ನು ಚಿಕಿತ್ಸೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೆ … Continue reading BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಸಾಗರದಲ್ಲಿ 29 ವರ್ಷದ ಯುವಕ ಸಾವು