ಶಿವಮೊಗ್ಗ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಶಿವಮೊಗ್ಗ ನಗರದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್(21) ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು.
ಇಂದು ಹಾಸ್ಟೆಲ್ ನಲ್ಲಿ ಸ್ನಾನಕ್ಕೆಂದು ತೆರಳಿದಂತ ಸಂದರ್ಭದಲ್ಲಿ ದಿಢೀರ್ ಕುಸಿದು ಬಿದ್ದಿದ್ದನು. ಆತನನ್ನು ಕೂಡಲೇ ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರು. ಆದರೇ ದುರಾದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿ ಗಣೇಶ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ








