ಕೋಲಾರ: ಜಿಲ್ಲೆಯಲ್ಲಿ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೆ ಎಸ್ ಆರ್ ಟಿ ಸಿ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದಂತ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್(53) ಎಂಬ ಕೆ ಎಸ್ ಆರ್ ಟಿ ಸಿ ನೌಕರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕೆ ಎಸ್ ಆರ್ ಟಿ ಸಿ ಡಿಪೋದಲ್ಲಿ ಬಾಬಾಜಾನ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದಂತ ಬಾಬಾಜಾನ್ ಅವರು ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ನಂತ್ರ ಘಟಕದಲ್ಲೇ ಕೆಲಸ ಮಾಡಿಕೊಂಡಿದ್ದರು.
ಭಾನುವಾರದಂದು ಕೂಡ ಕರ್ತವ್ಯಕ್ಕೆ ಹಾಜರಾಗಿದ್ದಂತ ಬಾಬಾಜಾನ್, ಮನೆಗೆ ತೆರಳಿದ ನಂತ್ರ ಸೋಮವಾರದಂದು ರಾತ್ರಿ ಹೃದಯಾಘಾತವಾಗಿದೆ. ಹೀಗಾಗಿ ಬಾಬಾಜಾನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
BREAKING: ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮದ ವೇಳಾಪಟ್ಟಿ ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ
BREAKING: ಬಾಲಿವುಡ್ ನ ಹಿರಿಯ ನಟ ಧೀರಜ್ ಕುಮಾರ್ ನಿಧನ | Dheeraj Kumar passes away