ಬೆಂಗಳೂರು: ನಗರದಲ್ಲಿ ರಸ್ತೆ ದಾಟುತ್ತಿದ್ದಂತ ವೇಳೆಯಲ್ಲಿ ವ್ಯಕ್ತಿಯೊಬ್ಬರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಈ ಮೂಲಕ ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶ ಮೂಲದ ಚೇತನ್(35) ಎಂಬುವರು ರಸ್ತೆ ದಾಟುತ್ತಿದ್ದಂತ ವೇಳೆಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಚೇತನ್ ತೀವ್ರರಕ್ತಸ್ತ್ರಾವದೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಹೌಸಿಂಗ್ ಬೋರ್ಡ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಘಟನೆಯ ನಂತ್ರ ಬಿಎಂಟಿಸಿ ಬಸ್ ಚಾಲಕ ಶಿವಕುಮಾರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಮನಿಸಿ: KEAಯಿಂದ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

BREAKING : ಭೂಪಾಲ್ ನ ‘ಟೆಂಟ್ ಹೌಸ್’ ಗೋದಾಮಿನಲ್ಲಿ ‘ಸಿಲಿಂಡರ್’ ಸ್ಫೋಟದಿಂದ ಭಾರಿ ಅಗ್ನಿ ಅವಘಡ

Share.
Exit mobile version