ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತ ಸುಜಾತ ಹಂಡಿ ಅವರನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಜಾತ ಹಂಡಿಯ ವಿರುದ್ಧವೇ ಮತ್ತೊಂದು ಆರೋಪ ಕೇಳಿ ಬಂದಿದ್ದು, ಯುವಕನೊಬ್ಬನ ಮೇಲೆ ಬೆಲ್ಟ್ ನಿಂದ ಹಲ್ಲೆ ಮಾಡಿ ಕ್ರೌರ್ಯ ಮೆರೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಹೌದು ವೈರಲ್ ಆದಂತಹ ವಿಡಿಯೋ ದಲ್ಲಿ ಯುವಕನೊಬ್ಬನನ್ನು ರೂಮ್ನಲ್ಲಿ ಕೂಡಿ ಹಾಕಿ ಸುಜಾತ ಹಂಡಿ ಬೆಲ್ಟ್ ಹಿಡಿದು ಆತನ ಮೇಲೆ ಹಿಗ್ಗಾಮುಗ್ಗ ಹಲ್ಲೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈಗಾಗಲೇ ಸುಜಾತ ಹಂಡಿ ವಿರುದ್ಧ ಹನಿ ಟ್ರ್ಯಾಪ್, ಕಿಡ್ನ್ಯಾಪ್ ಕೇಸ್ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿದ್ದು, ಎಲ್ಲಾ ಪ್ರಕರಣಗಳಲ್ಲೂ ಬೇಲ್ ಪಡೆದಿದ್ದಾರೆ. ಈ ಮೊದಲು ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದ ಸುಜಾತ ಪಾಲಿಕೆಯ ಕಾಂಗ್ರೆಸ್ ಸದಸ್ಯೆ ಸುವರ್ಣ ಅವರ ಜೊತೆಗೆ ಮನಸ್ತಾಪ ಉಂಟಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದೀಗ ಸುಜಾತ ಹಂಡಿ ಅವರ ಮತ್ತೊಂದು ಕ್ರೌರ್ಯದ ವಿಡಿಯೋ ವೈರಲ್ ಆಗಿದೆ.








