ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕೋದಕ್ಕೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಇಂದು ನಡೆದಿದೆ. ಅಲ್ಲದೇ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ ಕೂಗಿ ಹೈಡ್ರಾಮಾವನ್ನೇ ಏರ್ಪೋರ್ಟ್ ಬಳಿಯ್ಲಲಿ ನಡೆಸಲಾಗಿದೆ.
ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಇಂದು ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ಮುಟ್ಟಿದೆ. ವಿಮಾನ ನಿಲ್ದಾಣ ಬಳಿಯಲ್ಲಿ ಸಿಎಂ ಕಾರಿಗೆ ಕಪ್ಪು ಭಾವುಟ ಪ್ರದರ್ಶಿಸಿರುವಂತ ಬಿಜೆಪಿ ಕಾರ್ಯಕರ್ತರು, ಕಾರಿಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಿದ್ದಾರೆ.
ಇನ್ನೂ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಘೋಷಣೆ ಕೂಗಿರುವಂತ ಬಿಜೆಪಿ ಕಾರ್ಯಕರ್ತರು, ಕೆಲಕಾಲ ಏರ್ ಪೋರ್ಟ್ ಬಳಿಯಲ್ಲಿ ಹೈಡ್ರಾಮಾವನ್ನೇ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದಂತ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಕರೆದೊಯ್ದಿರೋದಾಗಿ ತಿಳಿದು ಬಂದಿದೆ.
BREAKING: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ