ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(National Investigation Agency – NIA) ಇಂದು ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಮೇಲೆ ದಾಳಿ ನಡೆಸಿದೆ.
ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್ಡಿಪಿಐ (Social Democratic Party of India) ಕಚೇರಿಗಳ ಮೇಲೆ NIA ದಾಳಿ ನಡೆಸಿದೆ.
ಇನ್ನೂ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ NIA ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು NIA ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ.
ಕೇರಳದ ಮಾಂಜೇರಿ, ಮಲಪ್ಪುರಂ ಜಿಲ್ಲಾ ಪಿಎಫ್ಐ ಘಟಕಗಳ ಅಧ್ಯಕ್ಷ ಒ.ಎಂ.ಎ.ಸಲ್ಮಾನ್ ಮತ್ತು ಇತರರ ಮನೆಗಳು ಹಾಗೂ ಪಿಎಫ್ಐ ಕಚೇರಿಗಳ ಮೇಲೆ NIA ದಾಳಿ ನಡೆಸಿದೆ.
“ಪಿಎಫ್ಐನ ರಾಷ್ಟ್ರೀಯ, ರಾಜ್ಯ ಮತ್ತು ಸ್ಥಳೀಯ ನಾಯಕರ ಮನೆಗಳ ಮೇಲೆ ದಾಳಿಗಳು ನಡೆಯುತ್ತಿವೆ. ರಾಜ್ಯ ಸಮಿತಿ ಕಚೇರಿಯ ಮೇಲೂ ದಾಳಿ ನಡೆಸಲಾಗುತ್ತಿದೆ” ಎಂದು ಪಿಎಫ್ಐ ಹೇಳಿಕೆಯಲ್ಲಿ ತಿಳಿಸಿದೆ.
BREAKING NEWS : ಮಂಗಳೂರಿನಲ್ಲಿ `SDPI,PFI’ ಕಚೇರಿಗಳ ಮೇಲೆ `NIA’ ದಾಳಿ : ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ
ʻನೆಪ್ಚೂನ್ & ಅದರ ಉಂಗುರʼಗಳ ಸ್ಪಷ್ಟ ಚಿತ್ರ ಸೆರೆಹಿಡಿದ ʻಜೇಮ್ಸ್ ವೆಬ್ʼ ಬಾಹ್ಯಾಕಾಶ ದೂರದರ್ಶಕ… ಫೋಟೋ ನೋಡಿ!
BIGG NEWS : ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗಳ ಅಂಗಾಂಗ ದಾನಕ್ಕೆ ನಿರ್ಧಾರ