ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(National Investigation Agency – NIA) ಇಂದು ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಮೇಲೆ ದಾಳಿ ನಡೆಸಿದೆ.

ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್​ಡಿಪಿಐ (Social Democratic Party of India) ಕಚೇರಿಗಳ ಮೇಲೆ NIA ದಾಳಿ ನಡೆಸಿದೆ.

ಇನ್ನೂ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್​ಐ ಕಚೇರಿ ಮೇಲೆ ಇಂದು ಬೆಳಗಿನ ಜಾವ 3.30ರ ರ ಸುಮಾರಿಗೆ NIA ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಕಚೇರಿಗೆ ಪ್ರವೇಶಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ​NIA ತನಿಖೆ ನಡೆಸುತ್ತಿದೆ. ಇದಕ್ಕಾಗಿ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು, ಭದ್ರತೆ ಒದಗಿಸಿದ್ದಾರೆ.

ಕೇರಳದ ಮಾಂಜೇರಿ, ಮಲಪ್ಪುರಂ ಜಿಲ್ಲಾ ಪಿಎಫ್​ಐ ಘಟಕಗಳ ಅಧ್ಯಕ್ಷ ಒ.ಎಂ.ಎ.ಸಲ್ಮಾನ್ ಮತ್ತು ಇತರರ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ NIA ದಾಳಿ ನಡೆಸಿದೆ.

“ಪಿಎಫ್‌ಐನ ರಾಷ್ಟ್ರೀಯ, ರಾಜ್ಯ ಮತ್ತು ಸ್ಥಳೀಯ ನಾಯಕರ ಮನೆಗಳ ಮೇಲೆ ದಾಳಿಗಳು ನಡೆಯುತ್ತಿವೆ. ರಾಜ್ಯ ಸಮಿತಿ ಕಚೇರಿಯ ಮೇಲೂ ದಾಳಿ ನಡೆಸಲಾಗುತ್ತಿದೆ” ಎಂದು ಪಿಎಫ್‌ಐ ಹೇಳಿಕೆಯಲ್ಲಿ ತಿಳಿಸಿದೆ.

BREAKING NEWS : ಮಂಗಳೂರಿನಲ್ಲಿ `SDPI,PFI’ ಕಚೇರಿಗಳ ಮೇಲೆ `NIA’ ದಾಳಿ : ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ

ʻನೆಪ್ಚೂನ್ & ಅದರ ಉಂಗುರʼಗಳ ಸ್ಪಷ್ಟ ಚಿತ್ರ ಸೆರೆಹಿಡಿದ ʻಜೇಮ್ಸ್ ವೆಬ್ʼ ಬಾಹ್ಯಾಕಾಶ ದೂರದರ್ಶಕ… ಫೋಟೋ ನೋಡಿ!

BIGG NEWS : ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗಳ ಅಂಗಾಂಗ ದಾನಕ್ಕೆ ನಿರ್ಧಾರ

Share.
Exit mobile version