ಬೆಂಗಳೂರು : ಸಚಿವ ಕೆ.ಎನ್ ರಾಜಣ್ಣ ವಿರುದ್ಧ ಅಪೇಕ್ಸ್ ಬ್ಯಾಂಕ್ ನಲ್ಲಿ 2000 ಕೋಟಿಗೂ ಅಧಿಕ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಒಳಗಾಗಿ ಈ ಒಂದು ಪ್ರಕರಣ ಇತ್ಯರ್ಥಪಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ಸರ್ಕಾರ ಯಾವುದೇ ರೀತಿಯಾದಂತಹ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇದೀಗ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲಹಳ್ಳಿ ಪ್ರಕರಣದ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಹೌದು ಅಪೆಕ್ಸ್ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ 2 ಸಾವಿರ ಕೋಟಿ ರೂ ಅಧಿಕ ಮೊತ್ತದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಲಿ ಸಚಿವ ಕೆ ಎನ್ ರಾಜಣ್ಣ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಕೋರ್ಟ್ ಮೂರು ತಿಂಗಳಲ್ಲಿ ಪ್ರಕರಣ ಇತ್ಯರ್ಥ ಮಾಡುವಂತೆ ಸರ್ಕಾದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿತ್ತು. ಅದರೆ, ಸರ್ಕಾರ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ಪತ್ರಬರೆದಿದ್ದಾರೆ.
ದೂರಿನಲ್ಲೆನಿದೆ?
ರಾಜ್ಯ ಅಪೆಕ್ಸ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿಎನ್ ದೇವರಾಜ್ ಅವರು ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆ ಪಡೆಯದೇ ಕಟ್ಟಡ ನಿರ್ಮಾಣ ಕಂಪನಿ, ಚಿನ್ನದ ಅಂಗಡಿ, ಸಕ್ಕರೆ ಕಾರ್ಖಾನೆಗಳಿಗೆ ನೂರಾರು ಕೋಟಿ ರೂಪಾಯಿ ನೀಡಲಾಗಿದೆ. ಈ ಸಾಲದ ವ್ಯವಹಾರದಲ್ಲಿ ಅವ್ಯವಹಾರ ನಡೆದಿದ್ದು, ಇದು ತನಿಖೆಯಿಂದಲೂ ಸಾಬೀತಾಗಿದೆ. ಈ ಎಲ್ಲಾ ಪ್ರಕರಣಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಶಿಫಾರಸ್ಸು ಮಾಡಲಾಗಿದೆ.
ಕೆ.ಎನ್ ರಾಜಣ್ಣ ವಿರುದ್ಧ ಆರೋಪವೇನು?
ಸಚಿವ ಕೆ ಎನ್ ರಾಜಣ್ಣ ವಿರುದ್ಧ ಅಪೇಕ್ಸ್ ಬ್ಯಾಂಕ್ ನಲ್ಲಿ ಎರಡು ಸಾವಿರ ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮೂರು ತಿಂಗಳ ಒಳಗಾಗಿ ಪ್ರಕರಣವನ್ನ ಇತ್ಯರ್ಥಪಡಿಸಿ ಎಂದು ಸೂಚನೆ ನೀಡಿತ್ತು. ಆದರೆ ಸರ್ಕಾರ ಇದುವರೆಗೂ ಯಾವುದೇ ರೀತಿಯಾದಂತಹ ಕ್ರಮ ಕೈಗೊಂಡಿಲ್ಲ.
ಅಪೆಕ್ಸ್ ಬ್ಯಾಂಕ್ ಅಕ್ರಮಗಳ ಕುರಿತು ಸಚಿವ ಕೆ ಎನ್ ರಾಜಣ್ಣ ಅವರನ್ನು ಕರ್ನಾಟಕ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಪ್ರಕರಣ 19 ಮತ್ತು ದಂಡ ಪ್ರಕ್ರಿಯೆ ಸಂಹಿತೆ 1973 ಖಾಸಗಿ ತನಿಖೆಗೊಳಪಡಿಸಲು ದೂರು ದಾಖಲಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ 2023ರ ಆಗಸ್ಟ್ 29ರಂದು ದೂರು ಸಲ್ಲಿಸಿದ್ದರು. ಆದರೆ, ಈ ಕುರಿತು ರಾಜ್ಯ ಸರ್ಕಾರವು ಇದುವರೆಗೂ ಯಾವುದೇ ಕ್ರಮವಹಿಸಿಲ್ಲ ಎಂದು ತಿಳಿದು ಬಂದಿದೆ.