ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ (ST Somashekar) ಹೇಳಿದ್ದಾರೆ.
ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಯಾವ ರೈತರು (Farmers) ಎಪಿಎಂಸಿ (APMC) ಕಾಯ್ದೆ ವಾಪಸ್ ಪಡೆಯುವಂತೆ ಮನವಿ ಮಾಡಿಲ್ಲ. ಹಾಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಚಿವ ಎಸ್.ಟಿ ಸೋಮಶೇಖರ್ (ST Somashekar) ಹೇಳಿದ್ದಾರೆ.
ಇನ್ನೂ, ಅಕ್ಟೋಬರ್ 2 ರಿಂದ ಜಾರಿ ಯಶಸ್ವಿನಿ ಯೋಜನೆಯಾಗಲಿದೆ ಅಂತ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನ ಪರಿಷತ್ ನಲ್ಲಿ ಈ ಬಗ್ಗೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡರ ಪ್ರಶ್ನೆಗೆ ಉತ್ತರಿಸಿದರು.
ಸಿಎಂ ಬಜೆಟ್ ಭಾಷಣದಲ್ಲಿ ತಿಳಿಸಿರುವಂಥೆ, ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಿಂದ ಜಾರಿ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಅವರು ಈಗಾಗಲೇ ಯೋಜನೆಗಾಗಿ 300 ಕೋಟಿ ಹಣ ಒದಗಿಸಲಾಗಿದೆ. ಯೋಜನೆ ಅನುಷ್ಠಾನಕ್ಕೆ ಈಗಾಗಲೇ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಎಲ್ಲ ರೈತರಿಗೆ ಈ ಯೋಜನೆ ಲಭ್ಯವಾಗುವುದಿಲ್ಲ, ಬದಲಿಗೆ ಸಹಕಾರಿ ಸಂಸ್ಥೆಗಳ ಸದಸ್ಯರಿಗೆ ಮಾತ್ರ ಈ ಯೋಜನೆ ಅನ್ವಯ ಆಗಲಿದೆ ಎಂದು ತಿಳಿಸಿದರು.