ಬೆಂಗಳೂರು: ಶೀಘ್ರವೇ ಸಿಇಟಿ ಅರ್ಜಿ ತುಂಬುವ ವಿಧಾನ ತಿಳಿಸಲು ಆಪ್ ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ ಕಂಪ್ಯೂಟರ್ ಆಧಾರಿತ ಸಿಇಟಿ ಪರಿಶೀಲನೆ ನಡೆಸಲಾಗುತ್ತದೆ ಅಂತ ಕೆಇಎ ಅಧ್ಯಕ್ಷರು ಆದ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಶನಿವಾರ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ ಸರ್ಕಾರ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ. ಈ ಸಂಪನ್ಮೂಲದ ಸದುಪಯೋಗ ಪೂರ್ಣ ಪ್ರಮಾಣದಲ್ಲಿ ಆಗುತ್ತದೆಯೇ ಎಂಬ ಬಗ್ಗೆಯೂ ಆಲೋಚಿಸಬೇಕಾಗುತ್ತದೆ ಎಂದು ಒತ್ತಿ ಹೇಳಿದರು.
ಮಹಾರಾಷ್ಟ್ರದಲ್ಲಿ ಕಂಪ್ಯೂಟರ್ ಆಧಾರಿತವಾಗಿ ಸಿಇಟಿ ನಡೆಸಿದ್ದ ಸಂಸ್ಥೆಯ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಲಾಗಿದೆ ಎಂದೂ ಸುಧಾಕರ ಹೇಳಿದರು.
ಸಿಇಟಿ ಅರ್ಜಿ ತುಂಬುವ ಹಂತದಲ್ಲಿ, ಮುಖ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ವಿದ್ಯಾರ್ಥಿಗಳು ಬಹುತೇಕ ಸೈಬರ್ ಸೆಂಟರುಗಳಿಗೆ ಹೋಗಿ ಅರ್ಜಿ ತುಂಬುತ್ತಿದ್ದು, ಗ್ರಾಮೀಣ ವಿದ್ಯಾರ್ಹತೆ, ಮೀಸಲಾತಿ ಮತ್ತಿತರ ಮಾಹಿತಿಗಳನ್ನು ನೀಡುವಾಗ ಹೆಚ್ಚಿನ ಪ್ರಮಾಣದಲ್ಲಿ ತಪ್ಪುಗಳನ್ನು ಎಸಗುತ್ತಿದ್ದಾರೆ ಎಂದರು.
ಸಿಇಟಿ ಅರ್ಜಿ ತುಂಬುವ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಪೂರ್ವ ತಯಾರಿ ನೀಡಲು ಆಪ್ ಒಂದನ್ನು ಸಿದ್ಧಪಡಿಸಲಾಗುತ್ತಿದೆ. ಇದು, ಬಹುಮಟ್ಟಿಗೆ ಕೊನೆಯ ಹಂತಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಇದರ ಜತೆಗೆ ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ ಮಾಡಿಸುವ ಉದ್ದೇಶವೂ ಇದೆ ಎಂದು ಸಚಿವರು ತಿಳಿಸಿದರು.
BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ