Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಕಾಂಗ್ರೆಸ್ ಸರಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಛಲವಾದಿ ನಾರಾಯಣಸ್ವಾಮಿ
KARNATAKA

BIG NEWS: ರಾಜ್ಯ ಕಾಂಗ್ರೆಸ್ ಸರಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಛಲವಾದಿ ನಾರಾಯಣಸ್ವಾಮಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬಿಜೆಪಿ ಶಾಸಕರಿಗೆ ಎಷ್ಟು ಅನುದಾನ ನೀಡಿದೆ? ಕಾಂಗ್ರೆಸ್ ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದೆ ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸವಾಲು ಹಾಕಿದರು.

ಮಾನ್ಯ ರಾಜ್ಯಪಾಲರ ಭೇಟಿಯ ಬಳಿಕ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಕಡಿಮೆ ಅನುದಾನ ಕುರಿತಂತೆ ಮಾತನಾಡುವ ಕಾಂಗ್ರೆಸ್ ಮುಖಂಡರು ತಮ್ಮ ಮನೆಯಲ್ಲಿ ಸತ್ತುಬಿದ್ದ ಹೆಗ್ಗಣವನ್ನು ಮೊದಲು ಆಚೆ ಬಿಸಾಡಲಿ; ಆಮೇಲೆ ಬೇರೆಯವರ ತಟ್ಟೆಯಲ್ಲಿ ಬಿದ್ದ ನೊಣವನ್ನು ಎತ್ತಿ ಆಚೆ ಹಾಕಬಹುದು ಎಂದು ತಿಳಿಸಿದರು. ತಾರತಮ್ಯ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿ; ಆಗ ನಾವು ನಿಯೋಗದಲ್ಲಿ ನಿಮ್ಮ ಜೊತೆ ಬರಲು ಸಿದ್ಧ ಎಂದು ತಿಳಿಸಿದರು.

ಹುಬ್ಬಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ, ಕಲ್ಲೆಸೆದ ದೇಶದ್ರೋಹಿಗಳನ್ನು ಬೆಂಬಲಿಸುವ ಹಾಗೂ ಅವರ ಮೊಕದ್ದಮೆ ರದ್ದುಪಡಿಸುವ ಸರಕಾರದ ನಿರ್ಧಾರದ ವಿರುದ್ಧ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರರ ಜೊತೆ ಚರ್ಚೆ ಮಾಡಿದ್ದು, ಹುಬ್ಬಳ್ಳಿಯಲ್ಲಿ ಶೀಘ್ರವೇ ದೊಡ್ಡ ಹೋರಾಟ ಮಾಡಲಿದ್ದೇವೆ ಎಂದರು. ಕೇಸು ರದ್ದತಿ ಸರಿಯಲ್ಲ ಎಂಬ ಕುರಿತು ಸರಕಾರಕ್ಕೆ ಪತ್ರ ಬರೆಯುವುದಾಗಿ ಹೇಳಿದರು.

ಸರಕಾರದ ಯೂ ಟರ್ನ್: ಛಲವಾದಿ ನಾರಾಯಣಸ್ವಾಮಿ

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಈ ಸರಕಾರ ವಜಾ ಮಾಡಬೇಕು ಎಂದು ಗೌರವಾನ್ವಿತ ರಾಜ್ಯಪಾಲರನ್ನು ಒತ್ತಾಯಿಸಿದ್ದಾಗಿ ವಿವರಿಸಿದರು.

ದೇಶದ್ರೋಹಿಗಳ ವಿರುದ್ಧ ನಮ್ಮ ಸರಕಾರ ಕೇಸುಗಳನ್ನು ಹಾಕಿತ್ತು. ಆದರೆ, ಕೋರ್ಟಿನಲ್ಲಿ ಕೇಸು, ಎನ್‍ಐಎ ತನಿಖೆ ನಡೆಯುತ್ತಿರುವಾಗ ಪ್ರಕರಣ ರದ್ದತಿ ಕುರಿತು ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಿದ್ದಾರೆ. ಪ್ರತಿಭಟನೆಗಳು ಹೆಚ್ಚಾದ ಬಳಿಕ ನಿನ್ನೆ ಕೋರ್ಟ್ ಒಪ್ಪಿದರೆ ಮಾತ್ರ ಕೇಸು ಹಿಂಪಡೆಯುವುದಾಗಿ ಯೂ ಟರ್ನ್ ಹೊಡೆದಿದ್ದಾರೆ ಎಂದು ಟೀಕಿಸಿದರು. ಮೊದಲು ಕೋರ್ಟಿಗೆ ಅರ್ಜಿ ಹಾಕಬೇಕಿತ್ತು ಎಂದ ಅವರು, ಓಲೈಕೆ ಮಾಡಲು ಕೇಸು ವಾಪಸ್ ಪಡೆಯುವ ನಿರ್ಧಾರ ಮಾಡಿದ್ದಾರೆ ಎಂದು ಟೀಕಿಸಿದರು.

ಎಲ್ಲ ಸ್ತರದಲ್ಲೂ ಹೋರಾಟ- ಸಿ.ಟಿ.ರವಿ

ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಕೋರ್ಟಿನಲ್ಲಿ ಮಾತ್ರವಲ್ಲದೆ, ಜನತಾ ನ್ಯಾಯಾಲಯದಲ್ಲೂ ಬಿಜೆಪಿ ಹೋರಾಟ ಮಾಡಲಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದರು. ಕೇಸ್ ವಾಪಸ್ ಪಡೆಯುವಾಗ ನೀವು ಕೋಮುವಾದಿ ಎಂದು ತೋರಿಸಿದ್ದೀರಿ ಎಂದು ಟೀಕಿಸಿದರು.

ಹಿಜಾಬ್ ವಿರುದ್ಧ ಹೋರಾಟ ಮಾಡಿದವರ ಕೇಸ್ ವಾಪಸ್ ಪಡೆದಿಲ್ಲ; ಆದರೆ, ಹಿಜಾಬ್ ಪರವಾಗಿ ಹೋರಾಟ ಮಾಡಿದವರ ಕೇಸ್ ವಾಪಸ್ ಪಡೆಯುತ್ತಾರೆ. ವಿದ್ಯಾರ್ಥಿಗಳಲ್ಲೂ ಭೇದಭಾವ ಮಾಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಲ್ಲಿ ಟೋಪಿ ಹಾಕುವವ ಯಾರು, ಕುಂಕುಮ ಇಡುವವರು ಯಾರೆಂದು ಭೇದಭಾವ ಮಾಡಿದ್ದೀರಿ ಎಂದು ಖಂಡಿಸಿದರು.

ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿ ಪ್ರಮುಖರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ, ಶಾಸಕರಾದ ಡಾ.ಅಶ್ವತ್ಥನಾರಾಯಣ್, ಎನ್.ರವಿಕುಮಾರ್, ಎಸ್.ಆರ್.ವಿಶ್ವನಾಥ್, ಸಿ.ಕೆ.ರಾಮಮೂರ್ತಿ, ಮಾಜಿ ಎಂಎಲ್‍ಸಿ ಮಹಂತೇಶ್ ಕವಟಗಿಮಠ ಮೊದಲಾದವರು ಇದ್ದರು.

ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

dk shivakumar

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

2 Mins Read

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

2 Mins Read

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

1 Min Read
Recent News

​ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಪೂರ್ಣ ಪಠ್ಯ ವಿಳಂಬಕ್ಕೆ ಪಾಕಿಸ್ತಾನವೇ ಕಾರಣ: ಜೆ.ಡಿ. ವ್ಯಾನ್ಸ್ ಸ್ಫೋಟಕ ಮಾಹಿತಿ ಬಹಿರಂಗ!

Watch Video: ನ್ಯೂಯಾರ್ಕ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ತಪ್ಪಿದ ಭಾರೀ ದುರಂತ; 16 ಪ್ರವಾಸಿಗರು ಕೊನೆಗೂ ಸೇಫ್

BREAKING: ಮಹಾರಾಷ್ಟ್ರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಕುಸಿದುಬಿದ್ದ ಹನುಮಾನ್ ದೇವಸ್ಥಾನದ ಮೇಲ್ಛಾವಣಿ! ಹಲವರಿಗೆ ಗಂಭೀರ ಗಾಯ

State News
dk shivakumar KARNATAKA

ಬಿಡದಿ ಯೋಜನೆ ಕುಮಾರಸ್ವಾಮಿ ಅವರದ್ದೇ : ಸಿಎಂ ಡಿ.ಕೆ. ಶಿವಕುಮಾರ್

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ಬೆಂಗಳೂರು: “ಬಿಡದಿಯ ರೈತರು ಮುಗ್ಧರು ಮತ್ತು ಒಳ್ಳೆಯವರು, ಆದರೆ ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಈ ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ…

ಬೆಂಗಳೂರು ಜನತೆ ಗಮನಕ್ಕೆ; ಜೂನ್.22ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut in Bengaluru

ಕೃಷಿ ಅಧಿಕಾರಿ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿದ ಕೆಇಎ!

BREAKING: ಜುಲೈ.6ಕ್ಕೆ ಕರ್ನಾಟಕ ಸಿಇಟಿ ಸೀಟು ಹಂಚಿಕೆ ಅಣಕು ಫಲಿತಾಂಶ ಪ್ರಕಟ | Karnataka CET Results

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.