ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ-4ರನ್ವಯ 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್ ಗಳಿಂದ ಅರ್ಜಿಗಳನ್ನು ದಿನಾಂಕ 15-11-2023 ಸಂಜೆ 5 ರಿಂದ 31-03-2024ರ ಸಂಜೆ 5ರ ಒಳಗೆ ಆನ್ ಲೈನ್ ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು ಎಂದಿದ್ದಾರೆ.
ಸದರಿ ಅರ್ಜಿ ಸಲ್ಲಿಸುವ ದಿನಾಂಕವನ್ನು 30-04-2024ರ ಸಂಜೆ 5ರವರೆಗೆ ವಿಸ್ತರಿಸಿದೆ. ಉಳಿದಂತೆ ಎಲ್ಲಾ ನಿಯಮಗಳು ದಿನಾಂಕ 09-11-2023ರ ಸುತ್ತೋಲೆಯಲ್ಲಿ ನೀಡಿರುವಂತೆ ಯಥಾವತ್ತಾಗಿ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.
ಲೋಕಸಭೆ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದ ಆಶ್ಚರ್ಯವಿಲ್ಲ- ಬೊಮ್ಮಾಯಿ