ಬಳ್ಳಾರಿ : ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿಯಿಂದ ದಿ ಫ್ಯಾಮಿಲಿ ಪಿಲ್ಲರ್ ಅಲೈಯನ್ಸ್ ಸಂಸ್ಥೆಯು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ, ಮನೆ ಮತ್ತು ಆಸ್ಪತ್ರೆ ಆರೈಕೆ ಮಾಡುವವರಿಗೆ ಉಚಿತ ನರ್ಸಿಂಗ್ ತರಬೇತಿ ಮತ್ತು ಉದ್ಯೋಗ ಕಲ್ಪಿಸಿಕೊಡಲು ಅರ್ಹ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 50 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ಇರುತ್ತದೆ.ತರಬೇತಿಯಲ್ಲಿ 30 ದಿನಗಳ ಪಠ್ಯ ಮತ್ತು 60 ದಿನಗಳ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳ ವಯೋಮಿತಿ 18-42 ಒಳಗಿರಬೇಕು, ಕನಿಷ್ಠ 8 ನೇ ತರಗತಿ ಉತ್ತೀರ್ಣರಾಗಿರಬೇಕು, ಸರಳ ಇಂಗ್ಲೀಷ್ ಗ್ರಹಿಕಾ ಸಾಮಥ್ರ್ಯ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಎಸ್.ಪಿ.ವೃತ್ತ, ಪಾರ್ವತಿನಗರದ ಬಸವಭವನ ರಸ್ತೆಯಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ಅಥವಾ ದೂ.08392-27398 9019847029, 9964502514, 8073852104, 984444958 ಗೆ ಸಂಪಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಸವರಾಜಪ್ಪ ಅವರು ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
ಮಡಿಕೇರಿ : 2022-23ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ಅರ್ಹ ವಿದ್ಯಾರ್ಥಿಗಳಿಂದ ಮಾತ್ರ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಧಿಯನ್ನು ಮಾರ್ಚ್, 27 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿಯನ್ನು http://shp.karnataka.gov.in ವೆಬ್ಸೈಟ್ನಲ್ಲಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್ಸಿ ಮತ್ತು ಎಸ್ಟಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ರೂ. 1 ಲಕ್ಷ ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ವಿಳಾಸ www.bcwd.karnataka.gov.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.
JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
JOB ALERT : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ