ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜೆ.ಇ.ಇ, ನೀಟ್ (JEE, NEET) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ 10 ತಿಂಗಳ ಅಥವಾ ನೀಟ್ ಪ್ರವೇಶ ಪರೀಕ್ಷೆ ಪ್ರಾರಂಭವಾಗುವವರೆಗೂ ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ವಸತಿಯುತ ಜೆ.ಇ.ಇ ನೀಟ್ ಲಾಂಗ್ ಟರ್ಮ್ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
BREAKING NEWS: ನಾಳೆ ‘ಶಿವಮೊಗ್ಗದ ಹೊಳಲೂರಿ’ನಲ್ಲಿ ನಿಗದಿಯಾಗಿದ್ದ ‘ಕಂದಾಯ ಸಚಿವ’ರ ‘ಗ್ರಾಮ ವಾಸ್ತವ್ಯ’ ಮುಂದೂಡಿಕೆ