ಬೆಂಗಳೂರು: ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನ ಯೋಜನೆಯ ಅಡಿಯಲ್ಲಿ 2.50 ಲಕ್ಷ, 3 ಲಕ್ಷ ಪ್ರೋತ್ಸಾಹಧನಕ್ಕೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ.
ಸಮಾಜ ಕಲ್ಯಾಣ ಇಲಾಖೆಯಿಂದ ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಯಾರಿಗೆಲ್ಲ ಪ್ರೋತ್ಸಾಹಧನ? ಎಷ್ಟು ನೀಡಲಾಗುತ್ತೆ ಗೊತ್ತಾ?
ಪರಿಶಿಷ್ಟ ಜಾತಿ ಯುವಕರು ಇತರೆ ಜಾತಿಯ ಯುವತಿಯರನ್ನು ವಿವಾಹವಾದಲ್ಲಿ, ಅಂತಹ ದಂಪತಿಗಳಿಗೆ ರೂ.2.50 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಪರಿಶಿಷ್ಟ ಜಾತಿ ಯುವತಿಯರು ಇತರೆ ಜಾತಿಯ ಯುವಕರನ್ನು ವಿವಾಹವಾದಲ್ಲಿ, ಅಂತಹ ದಂತಿಗಳಿಗೆ ರೂ.3 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅಂತರ್ಜಾತಿ ವಿವಾಹಿತ ದಂಪತಿಗಳು ವಿವಾಹವನ್ನು ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಬೇಕು. ಪ್ರೋತ್ಸಾಹಧನಕ್ಕಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಅಂತರ್ಜಾತಿ ವಿವಾಹಿತರು ಪ್ರೋತ್ಸಾಹಧನಕ್ಕಾಗಿ https://swdservices.karnataka.gov.in/swIncentive/ICM/ICMHome.aspx ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ.
ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಯುವತಿಯ ವಯಸ್ಸು 18 ರಿಂದ 42 ವರ್ಷ, ಯುವಕನ ವಯಸ್ಸು 21ರಿಂದ 45 ವರ್ಷ ಆಗಿರಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9482300400 ಗೆ ಕರೆ ಮಾಡಿ.
ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸೇವಾನಿರತ ಅಭ್ಯರ್ಥಿಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ
ಪೋಷಕರೇ ಗಮನಿಸಿ : ಮಕ್ಕಳಿಗೆ ‘ಬ್ಲೂ ಆಧಾರ್ ಕಾರ್ಡ್’ ಮಾಡಿಸುವುದು ಹೇಗೆ.? ಇಲ್ಲಿದೆ ಮಾಹಿತಿ








