ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿಗೆ ರೈತರ ಮಕ್ಕಳಿಗಾಗಿ ದಿ:02/05/2023 ರಿಂದ ದಿ: 29/02/2024 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ.
ಆಸಕ್ತರು ಅರ್ಜಿಯನ್ನು ತೋಟಗಾರಿಕೆ ಇಲಾಖೆಯ ವೆಬ್ಸೈಟ್ https://horticulturedir.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳುವುದು ಅಥವಾ ಶಿವಮೊಗ್ಗ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅಥವಾ ಆಯಾ ತಾಲ್ಲೂಕಿನಲ್ಲಿರುವ ತೋಟಗಾರಿಕೆ ಇಲಾಖೆಯ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 12/04/2023 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222794/9964512759 ಗೆ ಸಂಪರ್ಕಿಸುವುದು.
ಪ್ರಮುಖ ಕೆಲಸಕ್ಕೆ ಹೊರಡುವ ಮುನ್ನ ಹೀಗೆ ಮಾಡಿದರೆ ಖಂಡಿತ ಯಶಸ್ಸು ಸಿಗುತ್ತೆ
ಪ್ರಮುಖ ಕೆಲಸಕ್ಕೆ ಹೊರಡುವ ಮುನ್ನ ಹೀಗೆ ಮಾಡಿದರೆ ಖಂಡಿತ ಯಶಸ್ಸು ಸಿಗುತ್ತೆ