ಬೆಂಗಳೂರು: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ, ಕಾಲೇಜಿನಲ್ಲಿ, ಜುಲೈ 2026ನೇ ಅಧಿವೇಶನಕ್ಕಾಗಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025ನೇ ಡಿಸೆಂಬರ್ 7 ರಂದು ನಡೆಸಲಾಗುವುದು.
ಅಭ್ಯರ್ಥಿಗಳು ಸರ್ಕಾರÀದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ದಿನಾಂಕ 01-07-2026 ರಂತೆ 11-1/2 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಕಾಲೇಜಿನಲ್ಲಿ ವರ್ಷವೊಂದಕ್ಕೆ ಪ್ರಸಕ್ತ ವಿದ್ಯಾಭ್ಯಾಸ, ಶುಲ್ಕ ಸಾಮಾನ್ಯ ವರ್ಗಕ್ಕೆ ರೂ.98650/-ಗಳು ಹಾಗೂ ಎಸ್‍ಸಿ/ ಎಸ್‍ಟಿ ವರ್ಗಕ್ಕೆ ರೂ 81850/- ಗಳಾಗಿರುತ್ತದೆ. ಈ ಶುಲ್ಕ ಕಾಲ ಕಾಲಕ್ಕೆ ಹೆಚ್ಚಾಗಬಹುದು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.50,000/- ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಈ ಮೊತ್ತವನ್ನು ವಿದ್ಯಾರ್ಥಿಯು ಪದವೀಧರರಾದ ಬಳಿಕ ಹಿಂತಿರುಗಿಸಲಾಗುವುದು.
ಅರ್ಜಿ ನಮೂನೆಗಳನ್ನು ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ, ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್ – 248003 ಈ ವಿಳಾಸದ ಮೂಲಕ ಪಡೆಯಬಹುದು.
ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಪರಿಶಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣಪತ್ರದೊಂದಿಗೆ ಕಳುಹಿಸಬಹುದು. “THE COMMANDANT RIMC FUND” PAYABLE AT HDFC BANK, BALLUPUR CHOWK DEHRADUN (BANK CODE, 1399), UTTARAKHAND ವಿಳಾಸ, ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರÀಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಆರ್‍ಐಎಂಸಿ ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ. ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೆÇೀಸ್ಟ್ ಮೂಲಕ ರವಾನಿಸಲಾಗುತ್ತದೆ.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮುನ್ಸಿಪಾಲಿಟಿ / ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾμÉಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ದೃಢೀಕೃತ ಪ್ರತಿ, 5 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಗಳಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ), ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಾಗಿದ್ದಲ್ಲಿ, ಸಕ್ಷಮ ಪ್ರಾಧಿಕಾರದಿಂದ ಆಂಗ್ಲ ಭಾμÉಯಲ್ಲಿ ನೀಡಿದ ಜಾತಿ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ/ ನೊಂದಾಯಿತ ಅಂಚೆದ್ವಾರ ರವಾನಿಸಲು ರೂ. 42ರ ಅಂಚೆ ಚೀಟಿ ಅಂಟಿಸಿದ ಸ್ವ ವಿಳಾಸ ಲಕೋಟೆ, ಶಾಲಾ ಶಾಚಾರ್ಯರು / ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಧೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ, ತಹಸೀಲ್ದಾರರಿಂದ ಕರ್ನಾಟಕ ರಾಜ್ಯದ ವಾಸಸ್ಥಾನ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಅಡಕಗಳೊಂದಿಗೆ 2025 ನೇ ಅಕ್ಟೋಬರ್ 15 ರೊಳಗಾಗಿ ನಿರ್ದೆಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್. ಕಾರ್ಯಪ್ಪ ರಸ್ತೆ, ಬೆಂಗಳೂರು – 25 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://admission.schoolmitra.com/#/admission/new Enquiry/6396eff3fc26e41841a5afd6 ದೂರವಾಣಿ ಸಂಖ್ಯೆ 080-25589459 ಅಥವಾ ಸಮೀಪದಲ್ಲಿರುವ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.