ಬೆಂಗಳೂರು: 2026-27ನೇ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿ.ಇಡಿ (D.Ed), ಡಿ.ಪಿ.ಇಡಿ (D.P.Ed) ಮತ್ತು ಡಿ.ಪಿ.ಎಸ್.ಇ (DPSE) ಕೋರ್ಸ್‌ಗಳ ಪ್ರವೇಶಕ್ಕಾಗಿ ಶಾಲಾ ಶಿಕ್ಷಣ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ.
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಈ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ವಿವರಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: ಮೇ 06, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 01, 2026
ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್ ಮೂಲಕ.
ಅಭ್ಯರ್ಥಿಗಳು ಅರ್ಹತೆ, ಮೀಸಲಾತಿ, ಶುಲ್ಕದ ವಿವರಗಳು ಹಾಗೂ ಜಿಲ್ಲಾವಾರು ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ತಿಳಿಯಲು ಇಲಾಖೆಯ ಅಧಿಕೃತ ವೆಬ್‌ಸೈಟ್ www.schooleducation.karnataka.gov.in ಗೆ ಭೇಟಿ ನೀಡಬಹುದು. ಅಭ್ಯರ್ಥಿಗಳು ಅಧಿಸೂಚನೆಯನ್ನು ಕೂಲಂಕಷವಾಗಿ ಓದಿ, ಅರ್ಜಿಯನ್ನು ಭರ್ತಿ ಮಾಡಿದ ನಂತರ ಆಯಾ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಸಲ್ಲಿಸಬೇಕೆಂದು ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








