Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

ಅಮೇರಿಕಾದ 2ನೇ ಫೈಟರ್ ಜೆಟ್ ಎಫ್-35 ಹೊಡೆದುರುಳಿಸಿದ ಇರಾನ್: ಪೈಲಟ್ ಬದುಕುಳಿದಿರುವ ಸಾಧ್ಯತೆ ಕಡಿಮೆ

03/04/2026 1:53 PM

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

03/04/2026 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲ್ಯಾಟರಲ್ ಎಂಟ್ರಿ ಮುಖಾಂತರ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ
KARNATAKA

ಲ್ಯಾಟರಲ್ ಎಂಟ್ರಿ ಮುಖಾಂತರ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow0729/04/2024 4:32 AM

ಬೆಂಗಳೂರು: ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ನೇರ ಪ್ರವೇಶಕ್ಕಾಗಿ 32 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾ ಐ.ಐ.ಹೆಚ್.ಟಿ. ನಿಯಮಾನುಸಾರ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.
ಅಭ್ಯರ್ಥಿಗಳು ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10ನೇ ತರಗತಿ ತೇರ್ಗಡೆ ಜೊತೆಗೆ (2 ವರ್ಷಗಳ ಐಟಿಐ) ತೇರ್ಗಡೆ ಹೊಂದಿರಬೇಕು. ಅಥವಾ 10+2 ಪಾಸ್ ಜೊತೆಗೆ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ.

ಜವಳಿ ವಿಭಾಗದ ವೃತ್ತಿಪರ ಸ್ಟ್ರೀಮ್‍ನಲ್ಲಿ 10+2 ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್‍ನ್ನು ಅಭ್ಯಾಸ ಮಾಡಬೇಕು. ವಯೋಮಿತಿ ದಿನಾಂಕ: 01-07-2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷ. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಡೀಕೃತ ಅಂಕಗಳ ಮೆರಿಟ್‍ನ್ನು ಪರಿಗಣಿಸಲಾಗುವುದು.

ಲ್ಯಾಟರಲ್ ಎಂಟ್ರಿ ಮುಖಾಂತರ 2 ನೇ ವರ್ಷದ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) – 13 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) – 14 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) – 03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಸೇರಿ ಒಟ್ಟು 32 ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ:08372-297221 ಹಾಗೂ ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

ಅರ್ಜಿಗಳನ್ನು ಆನ್‍ಲೈನ್‍ನಲ್ಲಿ https://khtigadag.ac.in/Lateralentryadmissionform.pdf ಲಿಂಕ್ ಮೂಲಕ ಡೌನ್‍ಲೊಡ್ ಮಾಡಿಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102” ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications are invited for direct admission to second year diploma course through lateral entry ಲ್ಯಾಟರಲ್ ಎಂಟ್ರಿ ಮುಖಾಂತರ ದ್ವಿತೀಯ ವರ್ಷದ ಡಿಪ್ಲೋಮಾ ಕೋರ್ಸ್ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM2 Mins Read

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM1 Min Read

ಮಗನನ್ನ ರಾಜಕೀಯಕ್ಕೆ ತಂದು ವಸೂಲಿ ಮಾಡುತ್ತಿರುವ ಸಿಎಂಗೆ, ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : HDK

03/04/2026 1:38 PM1 Min Read
Recent News

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

03/04/2026 2:38 PM

ಅಮೇರಿಕಾದ 2ನೇ ಫೈಟರ್ ಜೆಟ್ ಎಫ್-35 ಹೊಡೆದುರುಳಿಸಿದ ಇರಾನ್: ಪೈಲಟ್ ಬದುಕುಳಿದಿರುವ ಸಾಧ್ಯತೆ ಕಡಿಮೆ

03/04/2026 1:53 PM

BREAKING: ಮತದಾನದ ದಿನದಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ ಘೋಷಿಸಿದ ಚುನಾವಣಾ ಆಯೋಗ

03/04/2026 1:45 PM

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM
State News
KARNATAKA

ಹೃದಯಾಘಾತಕ್ಕೆ 1 ವಾರ ಮೊದಲು ಈ ಲಕ್ಷಣ ಕಾಣುತ್ತವೆ : ನಿರ್ಲಕ್ಷ ಬೇಡ, ಎಚ್ಚರದಿಂದ ಇರಿ!

By kannadanewsnow0503/04/2026 2:38 PM KARNATAKA 2 Mins Read

ಹೃದಯಾಘಾತ (Heart Attack) ಎಂಬುದು ಇದ್ದಕ್ಕಿದ್ದಂತೆ ಸಂಭವಿಸುವ ಘಟನೆಯಂತೆ ಕಂಡರೂ, ವಾಸ್ತವದಲ್ಲಿ ದೇಹವು ಅದರ ಮುನ್ಸೂಚನೆಗಳನ್ನು ಕೆಲವು ದಿನಗಳ ಅಥವಾ…

ಪೆಟ್ರೋಲ್ ಬಂಕ್‌ಗಳಲ್ಲಿ ಮೊಬೈಲ್ ಬಳಕೆ ನಿಷೇಧವೇಕೆ? ಇಲ್ಲಿದೆ ಅಸಲಿ ಕಾರಣ!

03/04/2026 1:44 PM

ಮಗನನ್ನ ರಾಜಕೀಯಕ್ಕೆ ತಂದು ವಸೂಲಿ ಮಾಡುತ್ತಿರುವ ಸಿಎಂಗೆ, ಕುಟುಂಬ ರಾಜಕಾರಣದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ : HDK

03/04/2026 1:38 PM

ಚಾಮರಾಜನಗರದಲ್ಲಿ ಮುಂದುವರೆದ ಚಿರತೆ ಉಪಟಳ, ಭಕ್ತರಲ್ಲಿ ಆತಂಕ ಸೃಷ್ಟಿ!

03/04/2026 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.