ಮಂಡ್ಯ : ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವರಾದಂತಹ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರು ನಿನ್ನೆ ಮಂಡ್ಯ ಜಿಲ್ಲೆಯಲ್ಲಿ ಜನದಾದರ್ಶನ ಕಾರ್ಯಕ್ರಮ ನಡೆಸಿದರು. ಇದಾದ ಬಡಿಕ ಇಂದು ಎಚ್ ಡಿ ಕುಮಾರಸ್ವಾಮಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಿತು.
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಆಯೋಜಿಸಿದ್ದು, ಕೆರಗೋಡು ಗ್ರಾಮದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದು, ನಾವು ಅಧಿಕಾರಕ್ಕೆ ಬಂದ ಕೂಡಲೇ ಐದು ಗ್ಯಾರಂಟಿಗಳನ್ನು ಜಾರಿಗೆಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳು ಎಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತೇವೆ. ಸಬ್ಸಿಡಿ ಯೋಜನೆಗಳನ್ನು ನಾವು ನಿಲ್ಲಿಸಿಲ್ಲ ಎಂದರು.
ಬಿತ್ತನೆ ಬೀಜಗಳಿಗೆ ಯಾವುದೇ ತೊಂದರೆ ಇಲ್ಲ. ರೈತರ ಪರ ನಾವಿದ್ದೇವೆ. ವಿಪಕ್ಷಗಳು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿವೆ. ಜಿಲ್ಲೆಯಲ್ಲಿ 27,000 ಈ ಸ್ವತ್ತು ಪ್ರಕರಣ ವಿಲೇವಾರಿ ಮಾಡಲಾಗಿದೆ.ಕಳೆದ ಒಂದು ವರ್ಷದಿಂದ ಗೌರವಯುತವಾಗಿ ಕೆಲಸ ಮಾಡಿದ್ದೇವೆ. ಜನತಾದರ್ಶನದಲ್ಲಿ ಬರುವ ಅರ್ಜಿಗಳನ್ನ ಒಂದು ತಿಂಗಳಲ್ಲಿ ವಿಲೇವಾರಿ ಆಗಲಿದೆ ಎಂದು ಕೆರಗೋಡು ಗ್ರಾಮದಲ್ಲಿ ಸಚಿವ ಚೆಲುವರಾಯ ಸ್ವಾಮಿ ಹೇಳಿಕೆ ನೀಡಿದರು.