ಬೆಂಗಳೂರು, ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 2024-25 ನೇ ಸಾಲಿನ ಶೈಕ್ಷಣಿಕ ಅವಧಿಗೆ ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿವಿಧ ಸಂಸ್ಥೆಗಳಿಗೆ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‍ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ: 01-07-2024 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳ ಮೆರಿಟ್‍ನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ.

ಡಿಪ್ಲೊಮಾ ಕೋರ್ಸ್‍ಗೆ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) -17 ಅಭ್ಯರ್ಥಿಗಳು,  ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ – 03 ಅಭ್ಯರ್ಥಿಗಳು, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ), ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಸೇರಿ  ಒಟ್ಟು 44 ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‍ಗಾಗಿ ಕರೆಯಲಾಗುವುದು.ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿಗಳನ್ನು ಆನ್‍ಲೈನ್‍ನಲ್ಲಿ https://khtigadag.ac.in/AdmissionForm.pdf  ಲಿಂಕ್ ಮೂಲಕ ಡೌನ್‍ಲೊಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102” ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version