ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಳ್ಳಾರಿಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ತರಬೇತಿ, ಸಂಡೂರಿನಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿ, ಕುರುಗೋಡುನಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ, ಸಿರಗುಪ್ಪದಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೈಯನ್ಸ್ ತರಬೇತಿ ಹಾಗೂ ಕಂಪ್ಲಿಯಲ್ಲಿ ಮೊಬೈಲ್ ಫೋನ್ಸ್ ರಿಪೇರ್ಸ್ ಮತ್ತು ಸರ್ವೀಸಿಂಗ್ ಬಗ್ಗೆ ತರಬೇತಿಗಳನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಆಯಾ ವೃತ್ತಿಗಳಲ್ಲಿ ಪ್ರಾಯೋಗಿಕ ಹಾಗೂ ಸಿದ್ಧಾಂತದೊಂದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣ ಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಮತ್ತು ಸಂಬಂಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ ಹಾಗೂ ಮಾಹಿತಿ ನೀಡಲಾಗುವದು.
ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್‍ಎಸ್‍ಎಲ್‍ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಮೇ 30 ರೊಳಗಾಗಿ ಸಲ್ಲಿಸಬೇಕು.
30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ-583102 ಇಲ್ಲಿಗೆ ಭೇಟಿ ನೀಡಬಹುದು ಹಾಗೂ ಮೊ.9449226221, 7483538942, 9986332736 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದು ಎಂದು ಸಿಡಾಕ್‍ನ ಜಂಟಿ ನಿರ್ದೇಶಕ ಜಿ.ಯು.ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ರೈತರಿಗೆ ಸಂತಸದ ಸುದ್ದಿ: ಕರ್ನಾಟಕಕ್ಕೆ ಜೂನ್.10ರ ಬಳಿಕ ‘ಮುಂಗಾರು ಪ್ರವೇಶ’ | Mansoon Rain
BREAKING: ರಾಜ್ಯ ಸರ್ಕಾರದಿಂದ ‘ಅಭಿವೃದ್ಧಿ ಕಾಮಗಾರಿ’ಗಳಿಗೆ ‘ಮಾದರಿ ನೀತಿ ಸಂಹಿತೆ’ಯಿಂದ ವಿನಾಯ್ತಿ ನೀಡಿ ಆದೇಶ