ಬಳ್ಳಾರಿ: ಸಿದ್ಧ ಉಡುಪು ಸಂಶೋಧನೆ ತರಬೇತಿ ವಿನ್ಯಾಸ ಮತ್ತು ಅಭಿವೃದ್ಧಿ ಕೇಂದ್ರ ಸಂಸ್ಥೆಯು 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ವೃತ್ತಿಪರ ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ದ್ವಿತೀಯ ಪಿಯುಸಿ (ಕಲೆ, ವಾಣಿಜ್ಯ, ವಿಜ್ಞಾನ, ಶಿಕ್ಷಣ ಹಾಗೂ ಯಾವುದೇ ಡಿಪ್ಲೋಮಾ) ವಿಭಾಗದಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರುವು ಮೊದಲನೇಯ ರೈಲ್ವೇ ಗೇಟ್ ಹತ್ತಿರ, ಜಿಲ್ಲಾ ಕ್ರೀಡಾಂಗಣ ಮೈದಾನ ರಸ್ತೆಯ ಜಿಆರ್‍ಟಿಡಿಸಿ ಕಾಲೇಜಿನ ಪ್ರಾಂಶುಪಾಲರ ಕಚೇರಿ ಹಾಗೂ ಬೋಧಕ ಸಿಬ್ಬಂದಿಗಳ ಮೊ.9741264655, 9844862576, 9844474235, 8123126127 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.