ಮಡಿಕೇರಿ ಫೆ.08(ಕರ್ನಾಟಕ ವಾರ್ತೆ):-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 36 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ, 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು.
ಕ.ರಾ.ಮು.ವಿ.ಯು ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಮುಕ್ತಗಂಗೋತ್ರಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಅತ್ಯಂತ ಸುಂದರವಾದ ಹಸಿರು ಪರಿಸರದಲ್ಲಿ ಸುಸಜ್ಜಿತ ಆಡಳಿತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ಪ್ರಾಯೋಗಿಕ ಪ್ರಯೋಗಾಲಯವನ್ನು ಹೊಂದಿದ್ದು, ರಾಜ್ಯದಾದ್ಯಂತ 36 ಪ್ರಾದೇಶಿಕ ಕೇಂದ್ರಗಳು ಮತ್ತು 180 ಕಲಿಕಾರ್ಥಿ ಸಹಾಯ ಕೇಂದ್ರಗಳ ಮೂಲಕ ವಿದ್ಯಾರ್ಥಿ ಸ್ನೇಹಿ ಶಿಕ್ಷಣ ಸೇವೆ ಒದಗಿಸುತ್ತ ಬಂದಿದೆ.
ಕ.ರಾ.ಮು.ವಿ.ಯಲ್ಲಿ ಪದವಿ/ಸ್ನಾತಕೋತ್ತರ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಶ್ರೇಣಿಯ ಸರ್ಕಾರಿ ಹುದ್ದೆ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಎ.ಎಸ್. ಐ.ಎ.ಎಸ್. ಪೊಲೀಸ್ ಅಧಿಕಾರಿಗಳಾಗಿ, ಅಧ್ಯಾಪಕರಾಗಿ, ಶಿಕ್ಷಕರಾಗಿ ಕರಾಮುವಿಯ ವಿದ್ಯಾರ್ಥಿಗಳು ಆಯ್ಕೆಯಾಗುತ್ತಿದ್ದಾರೆ.
ಕ.ರಾ.ಮು.ವಿ.ಯು ಯು.ಜಿ.ಸಿ. ಮಾನ್ಯತೆ ಪಡೆದಿರುವ 47 ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡುತ್ತಿದ್ದು ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ ಎಂ.ಬಿ.ಎ ವಿಭಾಗದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ ಎಂ.ಸಿ.ಎ ಹಾಗೂ 10 ಆನ್‍ಲೈನ್ ಕೋರ್ಸ್‍ಗಳಿಗೆ ಪ್ರವೇಶಾತಿ ಮಾಡಲಾಗುತ್ತಿದೆ. ಕ.ರಾ.ಮು.ವಿ.ಯಲ್ಲಿ ಪ್ರಸ್ತುತ ಒಂದು ಲಕ್ಷ ಪ್ರವೇಶಾತಿ ಸಾಧಿಸಬೇಕು ಎಂಬ ಗುರಿ ಹೊಂದಲಾಗಿದೆ. ಯು.ಜಿ.ಸಿ. ಮಾನ್ಯತೆ:- ನ್ಯಾಕ್ ನಿಂದ ಂ + ಮಾನ್ಯತೆ ಪಡೆದಿದೆ. (CGPA 3.31)
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 1996 ರಲ್ಲಿ ಪ್ರಾರಂಭವಾಗಿದ್ದು; ಸರ್ಕಾರ ಗೆಜೆಟ್ ಅಧಿಸೂಚನೆ ಡಿಪಿಎಎಲ್ 43 ಶಾಸನ 2020 ದಿನಾಂಕ 30-12-2020 ರ ಅನ್ವಯ ಮುಕ್ತ-ದೂರ ಶಿಕ್ಷಣ ನೀಡುವ ರಾಜ್ಯದ ಅಧಿಕೃತ ಏಕೈಕ ವಿಶ್ವವಿದ್ಯಾನಿಲಯವಾಗಿದೆ.
ಎಲ್ಲಾ ಶೈಕ್ಷಣಿಕ ಕಾರ್ಯಕ್ರಮಗಳು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಮಾನ್ಯತೆ ಹೊಂದಿರುತ್ತದೆ. ಎಂಬಿಎ ಕಾರ್ಯಕ್ರಮವು ಎಐಸಿಟಿಇ ಯಿಂದ ಮಾನ್ಯತೆ ಪಡೆದಿದೆ. ಏಕಕಾಲದಲ್ಲೇ ಏರಡು ಪದವಿ (ದ್ವಿ-ಪದವಿ):-ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ ಶಿಕ್ಷಣ) ಒಂದು ಕೋರ್ಸ್ ಮತ್ತು ದೂರಶಿಕ್ಷಣದಲ್ಲಿ (Open University) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲೇ ಅಧ್ಯಯನ ಮಾಡಲು ಅವಕಾಶವಿದೆ.
ದೂರ ಶಿಕ್ಷಣ ನೀಡುವ ಕರ್ನಾಟಕ ರಾಜ್ಯದ ಏಕ ಮಾತ್ರ ವಿಶ್ವವಿದ್ಯಾನಿಲಯ:-ಕರ್ನಾಟಕ ರಾಜ್ಯದಲ್ಲಿ ಕ.ರಾ.ಮು.ವಿ. ಹೊರತುಪಡಿಸಿ ಬೇರಾವುದೇ ಸಾಂಪ್ರದಾಯಿಕ ವಿ.ವಿ.ಗಳು ದೂರ ಮತ್ತು ಮುಕ್ತ ಶಿಕ್ಷಣ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲವೆಂದು ಸರ್ಕಾರವು ದಿನಾಂಕ 30.12.2020ರ ಕರ್ನಾಟಕ ರಾಜ್ಯ ಪತ್ರದಲ್ಲಿನ ಅಧಿಸೂಚನೆ ಸಂಖ್ಯೆ:ಸಂವ್ಯಶಾಇ 43 ಶಾಸನದಲ್ಲಿ ಅಧಿಕೃತವಾಗಿ ಆದೇಶಿಸಿದ್ದು, ಈ ಆದೇಶದನ್ವಯ ಪ್ರಸ್ತುತ ರಾಜ್ಯದಲ್ಲಿ ಕರಾಮುವಿಯು ದೂರಶಿಕ್ಷಣ ನೀಡುವ ರಾಜ್ಯದ ಏಕೈಕ ವಿಶ್ವವಿದ್ಯಾನಿಲಯವಾಗಿರುತ್ತದೆ.
ಮಡಿಕೇರಿಯಲ್ಲಿ ಸುಸಜ್ಜಿತ ಕರಾಮುವಿ ಪ್ರಾದೇಶಿಕ ಕೇಂದ್ರ:- ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ನಗರದಲ್ಲಿ 2021 ರ ಡಿಸೆಂಬರ್ ತಿಂಗಳಲ್ಲಿ ಪ್ರಾದೇಶಿಕ ಕೇಂದ್ರವನ್ನು ಸ್ಧಾಪಿಸುವುದರ ಮೂಲಕ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ. ಈ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ ಕಛೇರಿಯಲ್ಲಿ ನುರಿತ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳಿಗೆ ಕರಾಮುವಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗುತ್ತಿದ್ದು,
ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರವು 2021-22 ಜನವರಿ ಆವೃತ್ತಿಯಲ್ಲಿ 95 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುತ್ತಾರೆ
2022-23 ಜುಲೈ ಆವೃತ್ತಿಯಲ್ಲಿ 267 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ದ್ವಿತೀಯ ವರ್ಷಕ್ಕೆ 4 ವಿದ್ಯಾರ್ಥಿಗಳು ನವೀಕರಣಗೊಂಡಿರುತ್ತಾರೆ. 2022-23 ಜನವರಿ ಆವೃತ್ತಿಯಲ್ಲಿ 165 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ದ್ವಿತೀಯ ವರ್ಷಕ್ಕೆ 78 ವಿದ್ಯಾರ್ಥಿಗಳು ನವೀಕರಣಗೊಂಡಿರುತ್ತಾರೆ. 2023-24 ಜುಲೈ ಆವೃತ್ತಿಯಲ್ಲಿ 353 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದು, ದ್ವಿತೀಯ ವರ್ಷಕ್ಕೆ 186 ವಿದ್ಯಾರ್ಥಿಗಳು ನವೀಕರಣಗೊಂಡಿರುತ್ತಾರೆ.
2021-22 ಜನವರಿ ಆವೃತ್ತಿಯಿಂದ 2024 ಜನವರಿಯವರೆಗೆ 1148 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುತ್ತಾರೆ. 2023-2024ರ ಜನವರಿ ಆವೃತ್ತಿಗೆ ಕೊಡಗು ಜಿಲ್ಲೆಯಾದ್ಯಂತ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ಆಕಾಂಕ್ಷೆ ಹೊಂದಿದ್ದು, ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರವು ಉನ್ನತ ಶಿಕ್ಷಣವನ್ನು ‘ಮನೆಯೇ ಮೊದಲ ಪಾಠಶಾಲೆ’ ಎಂಬ ಧ್ಯೇಯ ವಾಕ್ಯದೊಂದಿಗೆ ದೂರ ಶಿಕ್ಷಣವನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಮನೆಯಿಂದಲೇ ದೂರ ಶಿಕ್ಷಣವನ್ನು ಪಡೆಯಬಹುದಾಗಿದೆ.
ಪರೀಕ್ಷಾ ಕೇಂದ್ರ ಮತ್ತು ವಾರಾಂತ್ಯ ಸಂಪರ್ಕ ತರಗತಿಗಳು:-ಕರಾಮುವಿಯ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳು ಮಡಿಕೇರಿಯ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲೇ ನಡೆಯುತ್ತವೆ. ಕರಾಮುವಿಯ ವಾರಾಂತ್ಯ ಸಂಪರ್ಕ ತರಗತಿಗಳನ್ನು ಮತ್ತು ವಿಜ್ಞಾನ ವಿಷಯಗಳಿಗೆ ಪ್ರಯೋಗಿಕ ತರಗತಿಗಳನ್ನು ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ನಡೆಸಲು ಕ್ರಮವಹಿಸಲಾಗುತ್ತಿದೆ.
‘2023-24ರ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ:-ಪ್ರಸ್ತುತ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಪ್ರಕಟಣೆಯು ದಿನಾಂಕ 10.01.2024 ರಿಂದ ಪ್ರಾರಂಭವಾಗಿದ್ದು, ಪ್ರವೇಶಾತಿ ಪ್ರಕ್ರಿಯೆಗಳು ನಡೆಯುತ್ತಿವೆ, ಮಾರ್ಚ್ 31, 2023 ಕೊನೆಯ ದಿನವಾಗಿದೆ.’
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ . ಬಿ.ಎಸ್.ಡಬ್ಲ್ಯೂ ಹಾಗೂ ಬಿ.ಎಸ್ಸಿ (General, Home Science, and I.T) ಎಂ.ಎ/ಎಂ.ಸಿ.ಜೆ/ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಕರಾಮುವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸುವುದೇನೆಂದರೆ ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.inನಲ್ಲಿ KSOU Admission Portal ಮೂಲಕ ಈ ಮೇಲ್ಕಂಡ ಪದವಿಗಳಿಗೆ ಅನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ದಾಖಲಾತಿಗಳ ಪರಿಶೀಲನೆ ನಂತರ ಅನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಸಿದ್ದಪಾಠಗಳನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ, ಮಡಿಕೇರಿ -571201 ದೂರವಾಣಿ ಸಂಖ್ಯೆ:- 08272-201147, 8073342310, 9141938803, 9483391260, 8296215714, ವಸಂಪರ್ಕಿಸಬಹುದು ಎಂದು ರಾಜ್ಯ ಮುಕ್ತ ವಿಶ್ವವಿದ್ಯಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.
ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ ಒದಗಿಸಿರುವ ರಿಯಾಯಿತಿಗಳು ಬೋಧನಾ ಶುಲ್ಕ ರಿಯಾಯಿತಿ:-ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು. ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 15ರಷ್ಟು ರಿಯಾಯಿತಿ ನೀಡಲಾಗುವುದು. ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 25 ರಷ್ಟು ರಿಯಾಯಿತಿ ಇರುತ್ತದೆ. ಕೆಎಸ್‍ಆರ್‍ಟಿಸಿ/ ಬಿಎಂಟಿಸಿ/ ಎನ್‍ಡಬ್ಲ್ಯುಕೆಎಸ್‍ಆರ್‍ಟಿಸಿ/ಕೆಕೆಆರ್‍ಟಿಸಿ ನೌಕರರುಗಳಿಗೆ ಸ್ನಾತಕ/ ಸ್ನಾತಕೋತ್ತರ ಕೋರ್ಸ್‍ಗಳ ಬೋಧನಾ ಶುಲ್ಕದಲ್ಲಿ ಶೇಕಡ 25 ರಷ್ಟು ರಿಯಾಯಿತಿ ಇರುತ್ತದೆ.
ಪೂರ್ಣ ಶುಲ್ಕ ವಿನಾಯಿತಿ:- ತೃತೀಯ ಲಿಂಗದ (Transgender) ವಿದ್ಯಾರ್ಥಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಬಿಇಡಿ/ ಎಂಬಿಎ ಹೊರತುಪಡಿಸಿ)ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಆ ತಂದೆ / ತಾಯಿಯ ಮಕ್ಕಳಿಗೆ ಅವರು ಅರ್ಹತೆ ಹೊಂದಿ ಪ್ರವೇಶ ಬಯಸುವ ಶಿಕ್ಷಣಕ್ರಮಗಳಿಗೆ ಉಚಿತ ಪ್ರವೇಶಾತಿ ನೀಡಲಾಗುವುದು.
ವಿಶೇಷ ಸೂಚನೆ:-ಕರಾಮುವಿಯಲ್ಲಿ ಪ್ರವೇಶಾತಿ ಪಡೆಯುವ ಎಸ್‍ಸಿ, ಎಸ್‍ಟಿ, ಒಬಿಸಿ ವಿದ್ಯಾರ್ಥಿಗಳಿಗೂ ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್‍ಎಸ್‍ಪಿ ಮುಖಾಂತರ ವಿದ್ಯಾರ್ಥಿ ವೇತನವಿರುತ್ತದೆ ಅಥವಾ ಪೂರ್ಣ ಶುಲ್ಕ ಮರುಭರಿಕೆಯಾಗುತ್ತದೆ.
ಕ.ರಾ.ಮು.ವಿ.ಯ ವೈಶಿಷ್ಟ್ಯತೆಗಳು/ಸೌಲಭ್ಯಗಳು; ಪ್ರತಿ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರ, ಪ್ರತಿ ತಾಲ್ಲೂಕಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ. ಎಲ್ಲಾ ಶೈಕ್ಷಣಿಕ ಕ್ರಮಗಳ ಕಲಿಕಾ ಅಧ್ಯಯನ ಸಾಮಗ್ರಿ ಡಿಜಿಟಲೀಕರಣ, ಪ್ರತ್ಯೇಕ KSOU Academic Platform App ನ ಬಳಕೆ ಆನ್‍ಲೈನ್‍ನಲ್ಲಿ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಅಭ್ಯಸಿಸಲು ಅವಕಾಶ. ಕೌಶಲ್ಯಾಭಿವೃದ್ಧಿಗೆ ಪ್ರತ್ಯೇಕ ವಿಭಾಗ ರಚನೆ, ರಾಜ್ಯದ ಎಲ್ಲೆಡೆ ಕೌಶಲ್ಯಾಭಿವೃದ್ಧಿ ತರಬೇತಿ ಶಿಬಿರಗಳ ಆಯೋಜನೆ. `ದೃಶ್ಯವಾಹಿನಿ’ ಯೂಟ್ಯೂಬ್ ಚಾನೆಲ್ ಸ್ಥಾಪನೆ, ಅಧ್ಯಾಪಕರ ಬೋಧನಾ ವಿಡಿಯೋ ವಿದ್ಯಾರ್ಥಿಗಳಿಗೆ ಲಭ್ಯ. ಕ.ರಾ.ಮು.ವಿ. `ಪ್ರಸಾರಾಂಗ’, ರೇಡಿಯೋ ಸ್ಥಾಪನೆ. ಕ.ರಾ.ಮು.ವಿ. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಮೂಲಕ ಅತ್ಯಂತ ಕನಿಷ್ಠ ಶುಲ್ಕದಲ್ಲಿ ತರಬೇತಿ ನೀಡಲಾಗುತ್ತಿದೆ. ಡಿಜಿಟಲ್ ಮೌಲ್ಯಮಾಪನದ ಮೂಲಕ ಗುಣಮಟ್ಟದ ಮೌಲ್ಯಮಾಪನ, ಶೀಘ್ರ ಫಲಿತಾಂಶ ಪ್ರಕಟಣೆಗೆ ಅನುಕೂಲ ಮಾಡಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ನ್ಯಾಕ್ ನಿಂದ ಂ+ ಮಾನ್ಯತೆ ಪಡೆದಿರುತ್ತದೆ.ವಿದ್ಯಾರ್ಥಿಗಳ, ಸರ್ಕಾರಿ/ ಅರೆ ಸರ್ಕಾರಿ ನೌಕರರು ಹಾಗೂ ಖಾಸಗಿ ನೌಕರರ ಅನುಕೂಲಕ್ಕಾಗಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ ಎರಡನೇ/ನಾಲ್ಕನೇ ಶನಿವಾರ, ಭಾನುವಾರ ಹಾಗೂ ರಜಾ ದಿನಗಳಂದು ಪ್ರವೇಶಾತಿಯನ್ನು ನೀಡಲಾಗುವುದು.
ಮೈಸೂರು ಕ.ರಾ.ಮು.ವಿ.ದ ಕುಲಪತಿ ಪ್ರೊ..ಶರಣಪ್ಪ ವಿ.ಹಲಸೆ, ಮೈಸೂರು ಕ.ರಾ.ಮು.ವಿ.ದ ಕಾರ್ಯನಿರ್ವಾಹಕ ಅಭಿಯಂತರರಾದ ಭಾಸ್ಕರ್, ಮಡಿಕೇರಿ ಕ.ರಾ.ಮು.ವಿ.ಪ್ರಾದೇಶಿಕ ಕೇಂದ್ರದ ಮುಕ್ಕಾಟೀರ ಸ್ಮಿತಾ ಸುಬ್ಬಯ್ಯ ಅವರು ತಿಳಿಸಿದ್ದಾರೆ.