ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು
ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. 12 ತಿಂಗಳ ತರಬೇತಿ ಇದಾಗಿದ್ದು, ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 15,000/-ರೂ.ಗಳ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿರಬೇಕು. ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ, ಆಯ್ಕೆಯಾಗಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಅವಕಾಶವಿರುವುದಿಲ್ಲ.
ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ
ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ದಿ:09/12/2022 ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ-577201 ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಇಲಾಖೆಯ ಮಿಂಚೆಂಚೆ: varthabhavansmg1@gmail.com ನ್ನು ಸಂಪರ್ಕಿಸಿ.
ತಂಗಿ ತಂಗಿ ಎನುತ್ತಲೇ…. ಹಿಂದೂ ಹುಡುಗಿ ಪಟಾಯಿಸಿ ಎಸ್ಕೇಪ್ ಆದ ಮುಸ್ಲಿಂ ಹುಡುಗ