ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನವೆಂಬರ್ ತಿಂಗಳ ದಿ:20/11/2025 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವೀಸಿಂಗ್ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ನ. 20 ಬೆಳಗ್ಗೆ 10.00 ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
‘ಗ್ರಾಮ ಪಂಚಾಯಿತಿ’ ಚುನಾವಣೆ: ಹೈಕೋರ್ಟ್ ಮೆಟ್ಟಿಲೇರಿದ ‘ಕರ್ನಾಟಕ ಚುನಾವಣಾ ಆಯೋಗ’
ಸಾಗರ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಲ್ಮನೆಯಲ್ಲಿ ನಡೆಸಿದ ‘ಜನಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!








