ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಮರಾಠ ಪ್ರವರ್ಗ -3ಬಿ ಅಡಿಯಲ್ಲಿ 2ಎ ಯಿಂದ 2ಎಫ್ ವರೆಗೆ ಬರುವ ಸಮುದಾಯಕ್ಕೆ ಸೇರಿದ 18 ರಿಂದ 55 ವರ್ಷ ವಯೋಮಿತಿ ಹೊಂದಿದವರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ 3ಬಿಯಲ್ಲಿ ಪಡೆದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98,000/- ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷ ರೂ.ಗಳನ್ನು ಮೀರಬಾರದು ಅಂಗವಿಕಲ ಮಹಿಳೆಯರಿಗೆ ಶೇ.5% ರಷ್ಟು, ಮಹಿಳೆಯರಿಗೆ ಶೇ.33% ಹಾಗೂ ತೃತೀಯ ಲಿಂಗಿಗಳಿಗೆ ಶೇ.1% ರಷ್ಟು, ಅವಿವಾಹಿತ ಮಹಿಳೆಯರಿಗೆ ಶೇ.2ರಷ್ಟನ್ನು ಮೀಸಲಿರಿಸಿದೆ. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ, ಹೆಚ್.ಐ.ವಿ. ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರಬಾರದು.
ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
ಆಸಕ್ತರು ಸೇವಾಸಿಂಧು ಪೋರ್ಟಲ್‌ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಡಿ.06 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kmcdc.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸುವಂತೆ ತಿಳಿಸಿದೆ.
ಕನ್ನಡದಲ್ಲಿ ‘ವಿಜ್ಞಾನ’ದ ರಸದೌತಣ: ‘ಪರಮ್ ಸೈನ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ನಿಂದ ವಿಶೇಷ ಅಭಿಯಾನ!








