ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಉಚಿತವಾಗಿ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದಿನಾಂಕ 10-04-2024 ರಿಂದ 09-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಟಿವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ದುರಸ್ಥಿ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ.

ವಾಟ್ಸಾಪ್ ಮೂಲಕವೂ ಈ ತರಬೇತಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅದರ ಸಂಖ್ಯೆ 6364561982 ಆಗಿರುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದಾದರೇ www.rudsetitraining.org ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08256236404, 9591044014, 9448348569, 9448484237, 9980885900ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

ನನಗೆ ಬಿಎಸ್ ಯಡಿಯೂರಪ್ಪ ಮೇಲೆ ಅಪಾರವಾದ ನಂಬಿಕೆಯಿದೆ – ಸಚಿವ ಸಂತೋಷ್ ಲಾಡ್

BREAKING : ಭೂಪಾಲ್ ನ ‘ಟೆಂಟ್ ಹೌಸ್’ ಗೋದಾಮಿನಲ್ಲಿ ‘ಸಿಲಿಂಡರ್’ ಸ್ಫೋಟದಿಂದ ಭಾರಿ ಅಗ್ನಿ ಅವಘಡ

Share.
Exit mobile version