ಬೆಂಗಳೂರು: ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಅಸಿಡ್ ದಾಳಿಗೊಳಗಾದ ಮಹಿಳೆಯರ ಪುನರ್ವಸತಿಗಾಗಿ ‘ಗೆಳತಿ ಯೋಜನೆ’ಯನ್ನು ಅನುμÁ್ಠನಗೊಳಿಸುತ್ತಿದ್ದು, ಸದರಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಘಟಕ ವೆಚ್ಚ ರೂ.5,00.000/- (ಸಾಲ ರೂ.2,50,000/- ಹಾಗೂ ಸಹಾಯಧನ ರೂ.2,50,000/-ಗಳು) ವರೆಗೆ ನೀಡಲಾಗುತ್ತದೆ.
ಗೆಳತಿ ಯೋಜನೆಯಡಿ ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು- 560011 ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಛೇರಿ ಅವಧಿಯಲ್ಲಿ ಜನವರಿ 31 ರೊಳಗೆ ಸದರಿ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹದು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.