ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಜನ ಪುರುಷರು ಮತ್ತು 50 ಜನ ಮಹಿಳೆಯರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ.
ಈ ಸಂಬಂಧ ಕಲೆ, ಸಾಹಿತ್ಯ ಜಾನಪದ, ಕೃಷಿ-ಪರಿಸರ, ವಿಜ್ಞಾನ-ತಂತ್ರಜ್ಞಾನ ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ 10 ರಿಂದ 15 ವರ್ಷಗಳ ಗಣನೀಯ ಸೇವೆ ಸಲ್ಲಿಸಿರುವ 50 ವರ್ಷ ಮೇಲ್ಪಟ್ಟ ಸಾಧಕರು ತಮ್ಮ ಹೆಸರು, ವಿಳಾಸ ಜನ್ಮ ದಿನಾಂಕ ಸಾಧನೆಯ ಕುರಿತು 500 ಶಬ್ದಗಳ ಸಂಕ್ಷಿಪ್ತ ಕಿರು ಪರಿಚಯವನ್ನು ಕಳುಹಿಸಿ ಕೊಡಲು ಮನವಿ ಮಾಡಲಾಗಿದೆ.
ಸುವರ್ಣ ಮಹೋತ್ಸವ ಪ್ರಶಸ್ತಿಗಾಗಿ ಅರ್ಜಿಯನ್ನು, ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕನ್ನಡ ಭವನ ಜೆ.ಸಿ. ರಸ್ತೆ, ಬೆಂಗಳೂರು ರವರಿಗೆ ಅಕ್ಟೋಬರ್ 05 ರ ಒಳಗಾಗಿ ಮನವಿಗಳನ್ನು ಸಲ್ಲಿಸಬಹುದಾಗಿದೆ ಅಂದೇ ಕೊನೆಯ ದಿನಾಂಕವಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ವಿಜಯ ದಶಮಿ ವೇಳೆಗೆ 110 ಹಳ್ಳಿಗಳ ಮನೆಗಳಿಗೆ ಹರಿಯಲಿದೆ ‘ಕಾವೇರಿ ನೀರು’
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್