Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಚಿತ ಎಂಬ್ರಾಯಡರಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

14/02/2026 11:40 AM

ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

14/02/2026 11:37 AM

ಮಹಾ ಶಿವರಾತ್ರಿ ದಿನ ಉಪವಾಸ ಏಕೆ ಮಾಡಬೇಕು? ಉಪವಾಸದ ಹಿಂದಿನ ಇತಿಹಾಸವೇನು? ಇಲ್ಲಿದೆ ಮಾಹಿತಿ

14/02/2026 11:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
KARNATAKA

ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

By kannadanewsnow0514/02/2026 11:37 AM

ಶಿವಮೊಗ್ಗ: ಫೆಬ್ರುವರಿ 13, (ಕರ್ನಾಟಕ ವಾರ್ತೆ) : ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3-ಎ ನಲ್ಲಿ ಕ್ರಮ ಸಂಖ್ಯೆ 1 ರ(ಎ) ಯಿಂದ (ಟಿ) ರವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್‌ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ,ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಸಮುದಾಯಕ್ಕೆ ಸೇರಿದ ಜಾತಿಗಳಿಗೆ ಅನ್ವಯವಾಗುತ್ತದೆ.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬದ ವಾರ್ಷಿಕ ವರಮಾನ 3.00 ಲಕ್ಷಗಳ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರು ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಸರ್ಕಾರದ ವಿವೇಚನಾ ಕೋಟಾ/ ನಿಗಮದ ಅಧ್ಯಕ್ಷರು / ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರು ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.

ಆಸಕ್ತರು ಸೇವಾಸಿಂಧು ಪೋರ್ಟಲ್ ನ ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಗಳ ಮೂಲಕ ಆನ್ ಲೈನ್ ಮೂಲಕ ಮಾರ್ಚ್ 6 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದರೆ. ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ,ಶಿವಮೊಗ್ಗ. ದೂ,ಸಂ: 08182-229634 ನ್ನು ಸಂಪರ್ಕಿಸುವುದು.

Share. Facebook Twitter LinkedIn WhatsApp Email

Related Posts

ಉಚಿತ ಎಂಬ್ರಾಯಡರಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

14/02/2026 11:40 AM1 Min Read

ಮಹಾ ಶಿವರಾತ್ರಿ ದಿನ ಉಪವಾಸ ಏಕೆ ಮಾಡಬೇಕು? ಉಪವಾಸದ ಹಿಂದಿನ ಇತಿಹಾಸವೇನು? ಇಲ್ಲಿದೆ ಮಾಹಿತಿ

14/02/2026 11:36 AM2 Mins Read

ALERT : `ಮದ್ಯ’ ಪ್ರಿಯರೇ ಎಚ್ಚರ : ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ !

14/02/2026 11:24 AM1 Min Read
Recent News

ಉಚಿತ ಎಂಬ್ರಾಯಡರಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

14/02/2026 11:40 AM

ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

14/02/2026 11:37 AM

ಮಹಾ ಶಿವರಾತ್ರಿ ದಿನ ಉಪವಾಸ ಏಕೆ ಮಾಡಬೇಕು? ಉಪವಾಸದ ಹಿಂದಿನ ಇತಿಹಾಸವೇನು? ಇಲ್ಲಿದೆ ಮಾಹಿತಿ

14/02/2026 11:36 AM

ಪಲಾಶ್ ಮುಚ್ಚಲ್ ಮಾನನಷ್ಟ ಮೊಕದ್ದಮೆ: ಸ್ಮೃತಿ ಮಂಧಾನಾ ಸ್ನೇಹಿತನಿಗೆ ಬಾಂಬೆ ಹೈಕೋರ್ಟ್ ಬಿಗ್ ರಿಲೀಫ್!

14/02/2026 11:29 AM
State News
KARNATAKA

ಉಚಿತ ಎಂಬ್ರಾಯಡರಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

By kannadanewsnow0514/02/2026 11:40 AM KARNATAKA 1 Min Read

ಶಿವಮೊಗ್ಗ, ಫೆಬ್ರವರಿ 13, (ಕರ್ನಾಟಕ ವಾರ್ತೆ): ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ…

ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

14/02/2026 11:37 AM

ಮಹಾ ಶಿವರಾತ್ರಿ ದಿನ ಉಪವಾಸ ಏಕೆ ಮಾಡಬೇಕು? ಉಪವಾಸದ ಹಿಂದಿನ ಇತಿಹಾಸವೇನು? ಇಲ್ಲಿದೆ ಮಾಹಿತಿ

14/02/2026 11:36 AM

ALERT : `ಮದ್ಯ’ ಪ್ರಿಯರೇ ಎಚ್ಚರ : ಈ 3 ಲಕ್ಷಣಗಳು ಕಂಡ್ರೆ ತಕ್ಷಣ ಮದ್ಯಪಾನ ನಿಲ್ಲಿಸಿ !

14/02/2026 11:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.