ಬೆಂಗಳೂರು: ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್‍ಬಾಗ್, ಬೆಂಗಳೂರು ಇಲ್ಲಿ ಮೇ 02, 2024 ರಿಂದ ಫೆಬ್ರವರಿ 28.2025 ರ ವರೆಗೆ ನಡೆಯುವ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ವಾಸವಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.1,750/- ಗಳ ಮಾಸಿಕ ಶಿಷ್ಯ ವೇತನ (ಮಾಜಿ ಸೈನಿಕರನ್ನು ಹೊರತುಪಡಿಸಿ) ವನ್ನು ನೀಡಲಾಗುವುದು.
ಕನ್ನಡ ವಿಷಯಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ, ಮಾಜಿ ಸೈನಿಕರಿಗೆ 33 ರಿಂದ ಗರಿಷ್ಠ 65 ವರ್ಷ. ಇತರರಿಗೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ವಯೋಮಿತಿ ಇರಬೇಕು.
ಈ ತರಬೇತಿಯು ರೈತರ ಮಕ್ಕಳಿಗಾಗಿ ಇರುವುದರಿಂದ ಅಭ್ಯರ್ಥಿಯ ತಂದೆ ಅಥವಾ ಪೆÇೀಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಮಾಜಿ ಸೈನಿಕರು ಪ್ರವೇಶ ಪಡೆಯಲು ಇಚ್ಚಿಸಿದಲ್ಲಿ ಮೇಲೆ ತಿಳಿಸಿದ ವಿವರಗಳೊಂದಿಗೆ ಇತರೆ ದಾಖಲಾತಿಗಳಾದ Discharge book copy, personal pension order copy, Ex.serviceman ID card copy ಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು.
ಅರ್ಜಿಗಳನ್ನು ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) / ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ರವರ ಕಛೇರಿಯಲ್ಲಿ ಅಥವಾ ಇಲಾಖೆ ವೆಬ್‍ಸೈಟ್ https://horticulturedir.karnataka.gov.in ನಲ್ಲಿ 2024 ನೇ ಮಾರ್ಚ್ 01 ರಿಂದ ಮಾರ್ಚ್ 30 ರವರೆಗೆ ಪಡೆಯಬಹುದಾಗಿರುತ್ತದೆ.
ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.30 ಮತ್ತು ಮಾಜಿ ಸೈನಿಕರು, ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ರೂ.15/- ಗಳ ಮೌಲ್ಯದ ಇಂಡಿಯನ್ ಪೆÇೀಸ್ಟಲ್ ಆರ್ಡರ್ (ಐಪಿಒ), ಡಿಮ್ಯಾಂಡ್ ಡ್ರಾಫ್ಟ್ (ಡಿಡಿ)/ ಕೆ-2 ಪೇಮೆಂಟ್ ಚಲನ್ ಮೂಲಕ ಆಯಾಯ ಜಿಲ್ಲೆಗಳ ತೋಟಗಾರಿಕೆ ಉಪ ನಿರ್ದೇಶಕರು (ಜಿಲ್ಲಾ ಪಂಚಾಯತ್) ರವರ ಹೆಸರಿನಲ್ಲಿ ಪಡೆದು, ಅರ್ಜಿ ಜೊತೆಗೆ ಲಗತ್ತಿಸಬೇಕು.
ಅಭ್ಯರ್ಥಿಗಳನ್ನು, 2024 ನೇ ಏಪ್ರಿಲ್ 6 ರಂದು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ದಾಖಲಾತಿಗಳೊಂದಿಗೆ ಏಪ್ರಿಲ್ 1, 2024 ರ ಸಂಜೆ 5.00 ಗಂಟೆಯೊಳಗೆ ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ), ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ರವರ ಕಛೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ) / ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಅಥವಾ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್ ಬಾಗ್, ಬೆಂಗಳೂರು ಹಾಗೂ ದೂರವಾಣಿ ಸಂ. 080-22240444 / 9535417149 / 9900768298 ರವರನ್ನು ಸಂಪರ್ಕಿಸಬಹುದಾಗಿದೆ.