ಹಾವೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿ ಗರಿಷ್ಠ ರೂ.ಎರಡು ಲಕ್ಷ ಆರ್ಥಿಕ ನೆರವು ನೀಡಲಾಗುತ್ತಿದ್ದು, ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆಮೊತ್ತ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು.
ಅಭ್ಯರ್ಥಿಗಳು ಹಿಂದುಳಿದ ವರ್ಗ 1, 2ಎ, 3ಎ ಮತ್ತು 3ಬಿಗೆ( ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅಲೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಗಳಗಳು ಹೊರತುಪಡಿಸಿ) ಸೇರಿದವರಾಗಿರಬೇಕು. 18 ರಿಂದ ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ನಗರ ಪ್ರದೇಶದವರಿಗೆ ರೂ.1.20 ಲಕ್ಷದೊಳಗಿರಬೇಕು.
ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು, ಜಾತಿ ಮತ್ತು ಆದಾಯ ಪ್ರಮಣಪತ್ರ, ಬ್ಯಾಂಕ್ ಪಾಸ್ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಣ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿವುದಿಲ್ಲ.
ಆಸಕ್ತರು ವೆಬ್ಸೈಟ್ನಲ್ಲಿ www.suvidha.karanatak.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಮೂಲಕ ಭರ್ತಿಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಯೊಂದಿಗೆ ದಿನಾಂಕ 24-08-2022ರೊಳಗಾಗಿ ಸುವಿಧಾ ತಂತ್ರಾಂಶದ ಮುಖಾಂತರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.dbsdc.karanatak.gov.in ಸಂಪರ್ಕಿಸಬಹುದು. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಜಿಲ್ಲಾ ವ್ಯವಸ್ಥಾಪಕರ ಕಚೇರಿ ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದಕಚೇರಿಯಲ್ಲಿ ಉಚಿತವಾಗಿ ಆನ್ಲೈನ್ ಅರ್ಜಿ ಸಲ್ಲಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.