ಬೆಂಗಳೂರು: 2024-25 ನೇ ಸಾಲಿನಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪೆÇ್ರೀತ್ಸಾಹಿಸಲು ಹಸು / ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಶೇ.6ರ ಬಡ್ಡಿ ಸಹಾಯಧನ ನೀಡವ ಯೋಜನೆ ಜಾರಿಯಲ್ಲಿದ್ದು. ರೈತಾಪಿ ವರ್ಗದವರು ಅರ್ಜಿ ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತ್ತು ಇತರೆ ವರ್ಗದ ಆಸಕ್ತ ರೈತಾಪಿ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಬೆಂಗಳೂರು ಉತ್ತರ -9480319121, ಬೆಂಗಳೂರು ದಕ್ಷಿಣ-9448206163, ಬೆಂಗಳೂರು ಪೂರ್ವ-9448155033, ಆನೇಕಲ್-9448732044 ನ್ನು ಸಂಪರ್ಕಿಸಲು ಬೆಂಗಳೂರು ನಗರ ಜಿಲ್ಲೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.