ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯಿAದ ಜುಲೈ 10 ರಿಂದ 30 ದಿನಗಳ ಮೋಟಾರ್ ರಿವೈಂಡಿAಗ್ ಉಚಿತ ತರಬೇತಿ ಆಯೋಜಿಸಲಾಗಿದ್ದು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜುಲೈ 8 ರಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.