ಹಾವೇರಿ: ಜಿಲ್ಲೆಯ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆ ತೆರೆಯಲು ಡಿಪ್ಲೋಮಾ ಫಾರ್ಮಸಿ ಪದವೀಧರರು ಹಾಗೂ ಇತರೆ ಸ್ವಾಯತ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

BREAKING NEWS: ಮಹಿಳಾ ಹಾಕಿ ವಿಶ್ವಕಪ್: ಭಾರತ-ಇಂಗ್ಲೆಂಡ್ 1-1 ಡ್ರಾ | Women’s Hockey World Cup

ಜನೌಷಧಿ ಮಳಿಗೆ ಲಭ್ಯವಿಲ್ಲದ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ಜನೌಷಧಿ ಮಳಿಗೆ ತೆರೆಯಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೇಲ್ಕಂಡ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಿಂದ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆ ತರೆಯಲು ಲಭ್ಯವಿರುವ ಕಟ್ಟಡವನ್ನು ಪರಿಶೀಲಿಸಿ ನಿಯಮಾನುಸಾರ ಎನ್.ಒ.ಸಿ. ಹಾಗೂ ಆರೋಗ್ಯ ರಕ್ಷಾ ಸಮಿತಿ ಅನುಮೋದನೆ ಪ್ರತಿಯೊಂದಿಗೆ ಲಿಖಿತ ಅರ್ಜಿಯನ್ನು ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

CBSE 10th Result 2022: ನಾಳೆ ಸಿಬಿಎಸ್ಇ ಫಲಿತಾಂಶ ಪ್ರಕಟ: ಈ ವಿಧಾನ ಅನುಸರಿಸಿ, ಫಲಿತಾಂಶ ವೀಕ್ಷಿಸಿ

ಹೆಚ್ಚಿನ ಮಾಹಿತಿಗಾಗಿ ಮೊ.9448867799 ಸಂಪರ್ಕಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share.
Exit mobile version