ಬೆಂಗಳೂರು: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರವಾಹಿನಿ-ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವವರು ಆನ್‍ಲೈನ್ kacdc.karanatak.gov.in ರ ಮೂಲಕ ಆಗಸ್ಟ್ 31ರೊಳಗೆ ಸಲ್ಲಿಸಬೇಕು. ಅರ್ಜಿ ಹಾಗೂ ಯೋಜನೆಗಳ ಸಂಪೂರ್ಣ ಮಾಹಿತಿಗಾಗಿ kacdc.karanatak.gov.in ನಲ್ಲಿ ತಿಳಿಯಬಹುದು ಅಥವಾ ಬೆಂಗಳೂರು ದಕ್ಷಿಣ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 080-23156006, ನಿಗಮದ ಸಹಾಯವಾಣಿ : 9448451111 ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.