ಹಾವೇರಿ: ನ್ಯಾಷನಲ್ ಇ-ಸ್ಕಾಲರ್ಶಿಫ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ 2022-23ನೇ ಸಾಲಿನ ಪ್ರೀ-ಮ್ಯಾಟ್ರಿಕ್ ಹಾಗೂ ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯ ವಿಕಲಚೇತನ ವಿದ್ಯಾರ್ಥಿಗಳು ಆಯಾ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳ ಮೂಲಕ ಪ್ರೀ-ಮ್ಯಾಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ದಿನಾಂಕ 30-09-2022 ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ದಿನಾಂಕ 31-10-2022 ರೊಳಗಾಗಿ www.scholarship.gov.in ನಲ್ಲಿ ಅರ್ಜಿ ಸಲ್ಲಿಸಬೇಕು.
ಮ್ಯಾನುವೆಲ್ ದ್ವಿಪ್ರತಿ ಅರ್ಜಿಗಳನ್ನು ಆಯಾ ತಾಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್. ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್ ಅವರು ತಿಳಿಸಿದ್ದಾರೆ.