ಶಿವಮೊಗ್ಗ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಅಲ್ಪಸಂಖ್ಯಾತ ಸಮೂದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ 1 ರಿಂದ 8 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಶೈಕ್ಷಣಿಕ ವರ್ಷದಲ್ಲಿ 1 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. ಕಳೆದ ವರ್ಷದಲ್ಲಿ ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಯನ್ನು ಅಟೋ ರಿನಿವಲ್ ಎಂದು ಪರಿಗಣಿಸಲಾಗುವುದರಿಂದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹಿಂದಿನ ವರ್ಷ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿಸಲ್ಲಿಸಕ್ಕದ್ದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಪಾಲಕರ/ಪೋಷಕರ ವಾರ್ಷಿಕ ಆದಾಯ 1 ಲಕ್ಷ ಮೀರಿರಬಾರದು.
ಆಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪೋರ್ಟಲ್ https://ssp.postmatric.karnataka.gov.in ರಲ್ಲಿ ಅಕ್ಟೋಬರ್ 31 ರೊಳಗಾಗಿ ಅರ್ಜಿಸಲ್ಲಿಸುವಂತೆ ಹಾಗೂ ಅರ್ಜಿ ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು ನಿರ್ದೇಶನಾಲಯದ ವೆಬ್‌ಸೈಟ್ https://dom.karnataka.gov.in ನ್ನು ಸಂಪರ್ಕಿಸುವAತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್,5ನೇ ಪ್ಯಾರಲಲ್ ರಸ್ತೆ, ಶಿವಮೊಗ್ಗ. ದೂರವಾಣಿ 08182-220206 ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಶಿವಮೊಗ್ಗ -7676888388, ಭದ್ರಾವತಿ -9538853680, ಹೊಸನಗರ -9008447029, ಸೊರಬ -9513815513, ಸಾಗರ -7338222907, ತೀರ್ಥಹಳ್ಳಿ -8861982835, ಮತ್ತು ಶಿಕಾರಿಪುರ -7829136724 ಗಳನ್ನು ಸಂಪರ್ಕಿಸುವುದು.
ಭಾಗ್ಯಲಕ್ಷ್ಮಿ ಯೋಜನೆಯ ‘ಸೀರೆ ವಿತರಣೆ’ಯಲ್ಲಿ ಅಕ್ರಮ: ‘SIT ತನಿಕೆ’ಗೆ ಕೋರಿ ಸಿಎಂಗೆ ‘ರಮೇಶ್ ಬಾಬು’ ಪತ್ರ