ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಅಲೆಮಾರಿ/ಅರೆಅಲೆಮಾರಿ ಜನಾಂಗದವರ ಸಲಹಾ ಸಮಿತಿ/ಪ್ರಗತಿ ಪರಿಶೀಲನಾ ಸಮಿತಿಗೆ ಜಿಲ್ಲಾ ಮಟ್ಟದಲ್ಲಿ ಒಬ್ಬರು ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲು ಜಿಲ್ಲಾ ಮಟ್ಟದ ಅಲೆಮಾರಿ ಜನಾಂಗದ ಪ್ರತಿನಿಧಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ಸಂಸ್ಥೆಯಲ್ಲಿ ಸದಸ್ಯರಾಗಿರುವ ದಾಖಲೆ, ಸಮುದಾಯದ ಪ್ರಗತಿಗಾಗಿ ಅವರು ಮಾಡಿರುವ ಸಾಧನೆಗಳ ವಿವರ ಹಾಗೂ ವೈಯಕ್ತಿಕ ಮಾಹಿತಿಯನ್ನು ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿ ವಿ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವಿಧಿ, ಬೆಂಗಳೂರು-01 ಇಲ್ಲಿಗೆ ಜನವರಿ 31 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.