ಹಾವೇರಿ : ಪ್ರಸಕ್ತ ಸಾಲಿಗೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿ ಕುರಿ, ಮೇಕೆ ಘಟಕ ಸ್ಥಾಪನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಸದಸ್ಯರಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವರ್ಷದೊಳಗಿನವರಾಗಿರಬೇಕು. ಸಂಘಗಳು ಇಲ್ಲದಿರುವ ತಾಲೂಕುಗಳಲ್ಲಿಯ ಕುರಿ, ಮೇಕೆ ಸಕಾಣಿಕೆದಾರರು ಅರ್ಜಿ ಸಲ್ಲಿಸಬಹುದು. ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ವಿಶೇಷ ಘಟಕ ಯೋಜನೆ ಅಡಿಯಲ್ಲಿ ಕುರಿ ಘಟಕ-03, ಮೇಕೆ ಘಟಕ-02 ಸೇರಿ ಐದು ಹಾಗೂ ಗಿರಿಜನ ಉಪ ಉಪಯೋಜನೆಯಡಿ ಕುರಿ ಘಟಕ-02 ಹಾಗೂ ಮೇಕೆ ಘಟಕ ಒಂದು ಸೇರಿ ಮೂರು ಘಟಕ ಸ್ಥಾಪನೆ ಗುರಿ ನಿಗಧಿಪಡಿಸಲಾಗಿದೆ.
ಆಸಕ್ತರು ನಿಗಧಿತ ಅರ್ಜಿ ನಮೂನೆಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಲ್ಲಿ ಪಡೆದು, ಅಗತ್ಯ ದಾಖಲೆಯೊಂದಿಗೆ ಭರ್ತಿಮಾಡಿದರ್ಜಿಯನ್ನು ಜುಲೈ 30ರೊಳಗಾಗಿ ಸಲ್ಲಿಸಬೇಕು ಎಂದು ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.