ಶಿವಮೊಗ್ಗ : ರಾಜ್ಯ ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್ ಡಾಕ್ಯುಮೆಂಟ್ – ಸಚಿವ ಸುಧಾಕರ್
ವ್ಯಕ್ತಿ ಪ್ರಶಸ್ತಿ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಿಗೆ ತಲಾ ರೂ.1,00,000/- ನಗದು ಮತ್ತು ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸುವ ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಗುಪ್ತಚರ ಇಲಾಖೆ(ಇಂಟೆಲಿಜೆನ್ಸ್ ರಿಪೋರ್ಟ್) ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
Shocking: ತೆಲಂಗಾಣದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಗರ್ಭಿಣಿಯಾದ 6 ನೇ ತರಗತಿ ವಿದ್ಯಾರ್ಥಿನಿ
ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸೆ.30 ರೊಳಗೆ ಈ ಕಚೇರಿಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.