ಶಿವಮೊಗ್ಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಉಳಿಕೆ ಅನುದಾನದಲ್ಲಿ ಒಂದು ಮಿಶ್ರತಳಿ ಹಸು ಅಥವಾ ಸುಧಾರಿತ ತಳಿ ಎಮ್ಮೆ ಘಟಕ ಮತ್ತು ಕುರಿ ಅಥವಾ ಮೇಕೆ ಘಟಕ ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗಮನಿಸಿ : ಇನ್ಮುಂದೆ ಮನೆಯಲ್ಲೇ ಕುಳಿತು `ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು! ಹೇಗೆ ಗೊತ್ತಾ?New Ration Card
ಒಂದು ಮಿಶ್ರತಳಿ ಹಸು, ಸುಧಾರಿತ ತಳಿ ಎಮ್ಮೆ ಘಟಕದಲ್ಲಿ 01 ಮಿಶ್ರ ತಳಿ ಹಸು ಅಥವಾ 01 ಸುಧಾರಿತ ತಳಿ ಎಮ್ಮೆಯನ್ನು ವಿತರಿಸಲಾಗುವುದು, ಈ ಘಟಕದ ವೆಚ್ಚ ರೂ. 60,000 ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90) ರೂ. 54,000 ಸಹಾಯಧನ ಹಾಗೂ (ಶೇ.10) ರೂ.6000 ಬ್ಯಾಂಕ್ ನಿಂದ ಸಾಲದೊಂದಿಗೆ ಅನುಷ್ಠಾನಗೊಳಿಸಲಾಗುವುದು.
10+1 ಕುರಿ, ಮೇಕೆ ಘಟಕದಲ್ಲಿ 10 ಕುರಿ/ಮೇಕೆ ಮತ್ತು 01 ಟಗರು ಅಥವಾ 01 ಹೋತವನ್ನು ವಿತರಿಸಲಾಗುವುದು. ಈ ಘಟಕದ ವೆಚ್ಚ ರೂ. 66,000 ಆಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ (ಶೇ.90) ರೂ. 59400/- ಸಹಾಯಧನ ಹಾಗೂ (ಶೇ.10) ರೂ. 6600 ಬ್ಯಾಂಕ್ ನಿಂದ ಸಾಲದೊಂದಿಗೆ ಅನುಷ್ಠಾನ ಗೊಳಿಸಲಾಗುವುದು.
ದತ್ತಪೀಠ ವಿವಾದ : ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಎಂದ ಸಿ.ಟಿ ರವಿ |C.T Ravi
ಅರ್ಜಿ ಸಲ್ಲಿಸಲು ಅರ್ಹತೆಗಳ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ನಿಯಮದಂತೆ ಮಹಿಳೆಯರಿಗೆ ಶೇ.33.3 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ. 3 ರಷ್ಟು ಅಧ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.
ಅರ್ಜಿದಾರರು ಫ್ರೂಟ್ಸ್ ಐಡಿ (ಗುರುತಿನ ಸಂಖ್ಯೆ) ಹೊಂದಿರಬೇಕು. ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಕಛೇರಿಗಳಿಗೆ ಸಂಪರ್ಕಿಸಲು ಮತ್ತು ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಸಮಿತಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಜಿಲ್ಲೆಯ ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಶಿವಮೊಗ್ಗದ ಉಪನಿರ್ದೇಶಕರಾದ ಡಾ. ಶಿವಯೋಗಿ ಯಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.