ಶಿವಮೊಗ್ಗ : ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಹಂತಹಂತವಾಗಿ ಅನುಷ್ಟಾನ ಮಾಡಲು ಉದ್ದೇಶಿಸಲಾಗಿದ್ದು, ಈ ಕಾರ್ಯಕ್ರಮವನ್ನು ಕೃಷಿ ಯಂತ್ರಧಾರೆ ಕೇಂದ್ರಗಳೊಂದಿಗೆ ಇತರೆ ಸಂಘ-ಸಂಸ್ಥೆಗಳು ಹಾಗೂ ವೈಯುಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೇಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೇ.40 ರಿಂದ ಶೆ.70 ರಷ್ಟು ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅರ್ಜಿಯನ್ನು ಕೃಷಿ ಇಲಾಖೆ/ ಉಪ ಕೃಷಿ ನಿರ್ದೇಶಕರ ಕಚೇರಿ/ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆ.14ರೊಳಗಾಗಿ ಸಲ್ಲಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆ/ ಉಪ ಕೃಷಿ ನಿರ್ದೇಶಕರಕಚೇರಿ/ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವುದು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ