ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಯೋಜನೆಗಳಾದ ಮಧ್ಯಮ ವರ್ಗದ ಆರ್.ಎ.ಎಸ್. ಘಟಕ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ನಿರ್ಮಾಣಕ್ಕೆ ಸಹಾಯ ಮತ್ತು ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪ.ಜಾ./ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಮಾ. 31 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ
ಆಧುನಿಕ ‘ಭಾಗೀರಥಿ’ಯ ಪ್ರಯತ್ನದ ಫಲ : ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸಿದ ಗೌರಿ ನಾಯ್ಕ್