ಬೆಂಗಳೂರು: ರಾಜ್ಯ ಸರ್ಕಾರದಿಂದ ಆ್ಯಸಿಡ್ ಸಂತ್ರಸ್ತರಿಗೆ ನೆರವಾಗೋ ನಿಟ್ಟಿನಲ್ಲಿ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ 2.5 ಲಕ್ಷದವರೆಗೆ ಸಹಾಯಧನ, ಸಾಲಸೌಲಭ್ಯಕ್ಕೆ ಆರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ವಾರ್ತಾ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಮಹಿಳೆಯರ ಮೇಲೆ ಆ್ಯಸಿಡ್ ದಾಳಿಯು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಎಷ್ಟೇ ಉಗ್ರ ಶಿಕ್ಷೆಗೆ ಗುರಿಮಾಡಿದರೂ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಟ್ಟಂತಾಗುವುದಿಲ್ಲ. ಆದರೆ ಸಂತ್ರಸ್ತೆಯ ನೋವಿಗೆ ಸ್ಪಂದಿಸುವ ಮೂಲಕ ಆಕೆಗೆ ವೈದ್ಯಕೀಯ ನೆರವು, ಆಪ್ತಸಮಾಲೋಚನೆ, ಕಾನೂನು ನೆರವು ಇತ್ಯಾದಿ ಸೌಲಭ್ಯಗಳ ಜೊತೆಗೆ ಆಕೆಗೆ ಪುನರ್‌ಜೀವನ ಕಟ್ಟಿಕೊಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಸಂತ್ರಸ್ತೆಯರಿಗೆ ರೂ. 5 ಲಕ್ಷದ ವರೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಹೇಳಿದೆ.
ರಾಜ್ಯದ ಆಸಿಡ್ ಸಂತ್ರಸ್ತ ಮಹಿಳೆಯರಿಗೆ ಪುನರ್ ಜೀವನ ಕಲ್ಪಿಸೋದಕ್ಕಾಗಿ 2.5 ಲಕ್ಷ ಸಹಾಯಧನ, ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದಿದೆ. ಜನವರಿ 31ರ ಒಳಗಾಗಿ ಅರ್ಜಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು-560011ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ಮಹಿಳೆಯರ ಮೇಲೆ ಆ್ಯಸಿಡ್ ದಾಳಿಯು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಎಷ್ಟೇ ಉಗ್ರ ಶಿಕ್ಷೆಗೆ ಗುರಿಮಾಡಿದರೂ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಟ್ಟಂತಾಗುವುದಿಲ್ಲ. ಆದರೆ ಸಂತ್ರಸ್ತೆಯ ನೋವಿಗೆ ಸ್ಪಂದಿಸುವ ಮೂಲಕ ಆಕೆಗೆ ವೈದ್ಯಕೀಯ ನೆರವು, ಆಪ್ತಸಮಾಲೋಚನೆ, ಕಾನೂನು ನೆರವು ಇತ್ಯಾದಿ ಸೌಲಭ್ಯಗಳ ಜೊತೆಗೆ ಆಕೆಗೆ ಪುನರ್‌ಜೀವನ… pic.twitter.com/iHDBw5BSN1
— DIPR Karnataka (@KarnatakaVarthe) January 13, 2024
ಲೋಕಸಭಾ ಚುನಾವಣೆ : ನನಗೆ ಯತಿಂದ್ರ ಸಿದ್ದರಾಮಯ್ಯ ಎದುರಾಳಿಯಾದ್ರೆ ಒಳ್ಳೆಯದು : ಪ್ರತಾಪ್ ಸಿಂಹ
BIG BREAKING: ‘ಇಂಡಿಯಾ ಬ್ಲಾಕ್ ಮುಖ್ಯಸ್ಥ’ರಾಗಿ ‘ಮಲ್ಲಿಕಾರ್ಜುನ ಖರ್ಗೆ’ ನೇಮಕ