ಬೆಂಗಳೂರು: ರಾಜ್ಯ ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವಂತ ಕಿರಿಯ ಪಶುವೈದ್ಯಕೀಯ ಪರೀಕ್ಷಕರ ( Junior Veterinary Examiner ) 250 ಹುದ್ದೆಗಳಿಗೆ ಆನ್ ಲೈನ್ ( Online ) ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಪಶು ವೈದ್ಯಕೀಯ ಇಲಾಖೆಯಲ್ಲಿ ಖಾಲಿ ಇರುವಂತ 250 ಪಶು ವೈದ್ಯಕೀಯ ಸಹಾಕರ ನೇಮಕಾತಿಗೆ ( Recruitment ) ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳು, ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ ರೂ.750 ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ-1, ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500 ಶುಲ್ಕವಾಗಿರುತ್ತದೆ.
ನೇಮಕಾತಿ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.
BIGG BREAKING NEWS : ರಾಜ್ಯದಲ್ಲಿ ಮತ್ತೆ ‘108-ಆ್ಯಂಬುಲೆನ್ಸ್’ ಸೇವೆ ಪುನಾರಂಭ : ಆರೋಗ್ಯ ಸಚಿವ ಡಾ.ಕೆ ಸುಧಾಕರ್
ವೇತನ ಶ್ರೇಣಿ – ರೂ.21,400 ರಿಂದ 42,000 ಆಗಿರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕರ್ನಾಟಕ ಪಶಿ ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿವಿ, ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ ( ಪಶುಸಂಗೋಪನೆ) ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಇದಲ್ಲದೇ ನಿರ್ದೇಶಕರು, ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ( ಜೆಒಸಿ ಇನ್ ಡೈಲಿ, ಪೌಲ್ಟ್ರಿ, ಕುಕ್ಕುಟ)ದಲ್ಲಿ ಉತ್ತೀರಣವಾಗಿರಬೇಕು.
ವಯೋಮಿತಿ
ಕನಿಷ್ಠ 18 ವರ್ಷ ಗರಿಷ್ಠ ವಯೋಮೀತಿ ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳಾಗಿವೆ.
ಪ್ರಮುಖ ದಿನಾಂಕಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು ದಿನಾಂಕ 05-10-2022ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-11-2022 ಆಗಿರುತ್ತದೆ. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 06-10-2022 ಆಗಿದೆ.
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು https://cetonline.karnataka.gov.in/kea/kahvs ಲಿಂಕ್ ನಲ್ಲಿ ಕ್ಲಿಕ್ ಮಾಡಿ, ಸಲ್ಲಿಸಬಹುದಾಗಿದೆ.