ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನ ಸಂಸ್ಥೆಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಕೇಂದ್ರ ಕಾರಾಗೃಹ ಶಿವಮೊಗ್ಗ ಇಲ್ಲಿ ಖಾಲಿ ಇರುವ ಒಟ್ಟು 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲು ಅರ್ಹ ಎಂಬಿಬಿಎಸ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ: 07-01-2023 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆಯ/ತರಬೇತಿಯ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ಖುದ್ದಾಗಿ ಕಚೇರಿಗೆ ಅಥವಾ ದೂ.ಸಂ: 08182-222382 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.