ಬಳ್ಳಾರಿ: ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕಿನಲ್ಲಿ ಖಾಲಿಯಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
ಕಂಪ್ಲಿ ತಾಲ್ಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿ 1, ಸಿರುಗುಪ್ಪ ತಾಲ್ಲೂಕಿನ ಕೊಂಚಗೇರಿ ಗ್ರಾಮ ಪಂಚಾಯಿತಿ 1, ಕೆಂಚನಗುಡ್ಡ ಗ್ರಾಮ ಪಂಚಾಯಿತಿ 1 ಸೇರಿ ಒಟ್ಟು 03 ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು (ವಿಆರ್‍ಡಬ್ಲ್ಯೂ) ಖಾಲಿಯಿದ್ದು, ಆಯಾ ತಾಲ್ಲೂಕ್ ಪಂಚಾಯತ್ ಇವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇಮಿಸಲಾಗುವುದು.
ಹುದ್ದೆಗಳು ಗೌರವ ಧನ ಆಧಾರಿತ ತಾತ್ಕಾಲಿಕ ಹುದ್ದೆಗಳಾಗಿರುತ್ತವೆ. ಮಾಸಿಕ ಗೌರವಧನ ರೂ.9000/- ಇರುತ್ತದೆ. ಈ ಹುದ್ದೆಗಳಿಗೆ ಆಯಾ ಗ್ರಾಮ ಪಂಚಾಯಿತಿಯ ಸ್ಥಳೀಯ ವ್ಯಾಪ್ತಿಯಲ್ಲಿ ಬರುವ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 18 ರಿಂದ 45ವರ್ಷ ವಯೋಮಿತಿ ಹೊಂದಿರುವ ವಿಕಲಚೇತನರು ಅರ್ಹರಿರುತ್ತಾರೆ (ಕರ್ತವ್ಯ ನಿರ್ವಹಿಸಲು ಸಮರ್ಥರಿರುವ ವಿಕಲಚೇತನರು).
ಒಂದು ವೇಳೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ದೊರೆಯದಿದ್ದಲ್ಲಿ ಎಸ್.ಎಸ್.ಎಲ್.ಸಿ ಅನುತ್ತಿರ್ಣರಾದ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಸಮಿತಿಯು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 18 ಕೊನೆಯ ದಿನವಾಗಿರುತ್ತದೆ. ಅರ್ಜಿಗಳನ್ನು ಆಯಾ ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು(ಒಖW)ಗಳಿಗೆ ಸಲ್ಲಿಸಬಹುದಾಗಿರುತ್ತದೆ.
*ಅರ್ಹತೆಗಳು: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು (ಸ್ಥಳಿಯರಾಗಿರಬೇಕು). ವಯೋಮಿತಿ 18-45 ವರ್ಷದೊಳಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಒಂದು ವೇಳೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ದೊರೆಯದಿದ್ದಲ್ಲಿ ಎಸ್.ಎಸ್.ಎಲ್.ಸಿ ಅನುತ್ತಿರ್ಣರಾದ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಸಮಿತಿಯು ಪರಿಗಣಿಸಲಾಗುವುದು.
ಅಂಗವಿಕಲರಾಗಿರಬೇಕು, ಭಾಗಶ: ಅಂಧರು, ಭಾಗಶ: ಶ್ರವಣ ದೋಷವುಳ್ಳವರು (ಮೈಲ್ಡ್ ಮತ್ತು ಮಾಡರೇಟ್) ಹಾಗೂ ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುವುದು. ಮೂರು ರೀತಿಯ ಅಂಗವಿಕಲರಿಗೆ ಸಮಾನವಾಗಿ ಆಯ್ಕೆ ಮಾಡಬೇಕು ಒಂದು ವರ್ಗದ ಅಂಗ ವಿಕಲರಿಗೆ ಆಯ್ಕೆಗೆ ಲಭ್ಯವಿಲ್ಲದಿದ್ದಲ್ಲಿ ಇನ್ನೊಂದು ವರ್ಗದಲ್ಲಿರುವ ಅಂಗವಿಕಲ ಅಭ್ಯರ್ಥಿ ಆಯ್ಕೆ ಮಾಡಲು ಕ್ರಮ ಕೈಗೊಳ್ಳಬೇಕು. ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು. ಅಂಗವಿಕಲರಿಗೆ ಶೇ.40 ಕ್ಕಿಂತ ಮೇಲ್ಪಟ್ಟಿರಬೇಕು.
ಅಂಗವಿಕಲರ ಬಗ್ಗೆ ವೈದ್ಯಕೀಯ ಮಂಡಳಿ ಪ್ರಮಾಣ ಪತ್ರ, ಗುರುತಿನ ಚೀಟಿ ಹೊಂದಿರಬೇಕು. ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ, ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು. ಗೌರವಧನ ಅವಧಿ ಮುಂದುವರಿಸುವ ಬಗ್ಗೆ ಒಂದು ವರ್ಷದ ನಂತರ ಅವರ ಕಾರ್ಯ ವೈಖರಿಗೊಳಪಟ್ಟಿದ್ದು, ಮುಂದುವರಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆಯ್ಕೆ ಮಾಡುವಾಗ ಸರ್ಕಾರ ನಿಗದಿ ಪಡಿಸಿರುವ ಕರ್ತವ್ಯಗಳನ್ನು ನಿರ್ವಹಿಸಲು “ಸಮರ್ಥಕ” ಎಂಬ ಬಗ್ಗೆ ಪರಿಶೀಲಿಸಿ ಆಯ್ಕೆ ಮಾಡುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರು ಕೆಲಸದಿಂದ ತೆಗೆದು ಹಾಕ ಬಹುದಾಗಿ, ಬಿಡುಗಡೆ ಮಾಡಬಹುದಾಗಿದೆ. ಗೌರವಧನದ ಆಧಾರದ ಮೇಲೆ ಕೆಲಸ ನಿರ್ವಹಿಸುವುದರಿಂದ ಖಾಯಂಗೊಳಿಸುವಂತೆ ಕೋರಲು ಅವಕಾಶವಿಲ್ಲ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಎಂಆರ್‍ಡಬ್ಲ್ಯೂ ರಾಣಿ ಅವರ ಮೊ.8880875620, ಸಿರುಗುಪ್ಪ ಎಂಆರ್‍ಡಬ್ಲ್ಯೂ ಸಾಬೇಶ ಅವರ ಮೊ.9743509698 ಹಾಗೂ ಜಿಲ್ಲಾ ಸಂಯೋಜಕ ಟೇಕರಾಜ್ ಅವರ ಮೊ.9481320119 ಅಥವಾ ಕಚೇರಿ ದೂ.08392267886 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.